ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಎದುರಿಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಮಾಜಿ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವ‌ರ್, ರಾಜ್ಯ ಸರಕಾರದ ಕಾರ್ಯದರ್ಶಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಕುಮಾರ್ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮೇ 2023ರಿಂದ 2000 ರೂ.ಗಳ ನೋಟುಗಳಲ್ಲಿ 97.69% ಮರಳಿದೆ, ಇನ್ನೂ 8,202 ಕೋಟಿ ರೂಪಾಯಿ ಮರಳಬೇಕಿದೆ : RBI

ಬಿಜೆಪಿ ಸರಕಾರದ ಅವಧಿಯಲ್ಲಿ ಕೆ.ಸುಧಾಕ‌ರ್ ಅವರು ನಡೆಸಿದ್ದಾರೆ ಎನ್ನಲಾದ ಕೋವಿಡ್ ಹಗರಣದ ಬಗ್ಗೆ ತನಿಖೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. 2021ರ ಜುಲೈ-ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿರುವಂತೆ ಕೋವಿಡ್ ನಿರ್ವಹಣೆ ತಡೆಗಟ್ಟಲು ಔಷಧ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ತನಿಖೆಗೆ ನ್ಯಾಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿ, 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿತ್ತು.

ಬೀದರ್ : ಕಾರಿನಲ್ಲಿ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3 ಲಕ್ಷ ಹಣ ಸೀಜ್

ಈ ನಡುವೆ ಕೋವಿಡ್ ಅಕ್ರಮದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು ಹಗರಣವನ್ನು ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್‌ನ ಯಾವ್ಯಾವ ನಾಯಕರನ್ನು ಭೇಟಿಯಾಗಿದ್ದಾರೆಂಬುದು ಗೊತ್ತಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಅವರು ಹೇಳಿಕೆ ನೀಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಪ್ರದೀಪ್ ಈಶ್ವರ್ ಹೇಳಿಕೆಯನ್ನು ಕೂಲಂಕುಶವಾಗಿ ಪರಿಶೀಲಸವಾಗುತ್ತದೆ.ಹೀಗಾಗಿ ಅವರ ಹೇಳಿಕೆಯ ಕುರಿತು ಪರಿಶೀಲನೆ ನಡೆಸಲು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.

ಹಾಸನದಲ್ಲಿ ಭೀಕರ ಅಪಘಾತ : ನಿಂತಿದ್ದ ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರ ದುರ್ಮರಣ

ಇದನ್ನು ಗಂಭೀರವಾಗಿ ಪರಿಗಣಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳು ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದನ್ನು ಪರಿಗಣಿಸಿ, ವಾಸ್ತವಿಕ ಸತ್ಯ ಮರೆಮಾಚಿ ಸರಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗಲು ಕಾರಣರಾಗಿರುವ ಡಾ.ಕೆ. ಸುಧಾಕ‌ರ್ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share.
Exit mobile version