ಚಿಕ್ಕಬಳ್ಳಾಪುರ: ಕೋವಿಡ್ -19 ನಿರ್ವಹಣೆಯಲ್ಲಿ ದುರುಪಯೋಗ ಖಂಡಿತವಾಗಿಯೂ ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರನ್ನು ಕಾಡುತ್ತದೆ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮಂಗಳವಾರ ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಮ್ಮ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಸಿಎಂ, ಡಿಸಿಎಂ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಾರೆ. ಹಗರಣವು ಅವರನ್ನು ಖಂಡಿತವಾಗಿಯೂ ಕಾಡುತ್ತದೆ” ಎಂದರು