ಬೆಂಗಳೂರು: ಚೀನಾದಲ್ಲಿ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳವಾಗುತ್ತಿದ್ದರಿಂದ ಕರ್ನಾಟಕದಲ್ಲೂ ಹರಡುವ ಭೀತಿ ಶುರುವಾಗಿದೆ.
ಹೀಗಾಗಿ ಇಂದು ಕೋವಿಡ್ ಸಭೆ ನಡೆಸಲಾಗಿತ್ತು. ಈ ಸಬೆಯಲ್ಲಿ ಬೆಂಗಳೂರಿಗೆ ಹೊಸ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏರ್ ಪೋರ್ಟ್ ಗಳಲ್ಲಿ ಆರ್ ಟಿಪಿಆರ್ ತಪಾಸಣೆಗೆ ಸೂಚನೆ ನೀಡಲಾಗಿದೆ. ಬೆಂಗಳೂರು ಮತ್ತು ಮಂಗಳೂರು ಏರ್ ಪೋರ್ಟ್ ನಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕಿತರ ಚಿಕಿತ್ಸೆಗೆ ಎರಡು ಆಸ್ಪತ್ರೆಗೆ ಮೀಸಲಿಡಲಾಗಿದೆ. ರಾಜ್ಯದಲ್ಲಿ ಮತ್ತೆ ಲಸಿಕಾ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಲಾಗಿದೆ. ಜಿಲ್ಲಾಮಟ್ಟದಿಂದ ಗ್ರಾಮಪಂಚಾಯಿತಿ ಮಟ್ಟದಲ್ಲಿ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರು ಕೂಡಲೇ ಲಸಿಕೆ ಹಾಕಿಸಿಕೊಳ್ಳಬೇಕು. ಬೂಸ್ಟರ್ ಡೋಸ್ ಲಸಿಕೆ ಹಾಕಿಕೊಳ್ಳುವಂತೆ ಜನರಿಗೆ ಮನವಿ ಮಾಡಿದ್ದಾರೆ. ಒಳಾಂಗಣದಲ್ಲಿ ಆಸನದ ಸಾಮರ್ಥ್ಯವಿದ್ದಷ್ಟು ಮಾತ್ರ ಜನ ಇರಬೇಕು. ಹೊಸ ವರ್ಷಾಚರಣೆ ದಿನ ಎಲ್ಲರೂ ಕಡ್ಡಾಯ ಮಾಸ್ಕ್ ಧರಿಸಬೇಕು