ಬೆಂಗಳೂರು: ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ. 60 ವರ್ಷ ಹಾಗೂ ದೀರ್ಘ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಬುಧವಾರದಿಂದ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. 1 ಮತ್ತು 2ನೇ ಕೋವಿಡ್ ಸಂದರ್ಭದಲ್ಲಿ ನೀಡಲಾದ ಲಸಿಕೆಗಳನ್ನೇ ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಇದೇ ವೇಳೆ ಅವರು ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೇ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ.