ಚಾಮರಾಜನಗರ: ಜಿಲ್ಲೆಯಲ್ಲಿ ಕೋಂಬಿಂಗ್ ಕಾರ್ಯಾಚರಣೆಯ ವೇಳೆಯಲ್ಲಿ ಹಾಡಹಗಲೇ ಹುಲಿಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.
ಹೌದು. ಕೋಂಬಿಂಗ್ ಕಾರ್ಯಾಚರಣೆಯ ವೇಳೆಯಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಪಡಗೂರು ಗ್ರಾಮದಲ್ಲಿ ನಡೆಯುತ್ತಿದ್ದ ಹುಲಿ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಹಾಡಹಗಲೇ ಹಸುವಿನ ಮೇಲೆ ದಾಳಿ ನಡೆಸಿ, ಕೊಂದಿದೆ.
ಹುಲಿ ಸೆರೆ ಕಾರ್ಯಾಚರಣೆಯ ವೇಳೆ ಮಾರ್ಗಸೂಚಿ ಪಾಲನೆ ಮಾಡದಿದ್ದದ್ದೇ ಇದಕ್ಕೆ ಕಾರಣ ಎಂಬುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಕೋಂಬಿಂಗ್ ನಡೆಸುವಾಗ ಎಚ್ಚರಿಕೆ ಕೊಡಬೇಕಿದ್ದ ಅರಣ್ಯ ಇಲಾಖೆ, ಇದನ್ನು ಮರೆತಿದ್ದೇ ಕಾರಣ ಎನ್ನಲಾಗುತ್ತಿದೆ.








