ಚಿತ್ರದುರ್ಗ: ಮುರುಘಾ ಮಠದಲ್ಲಿನ 47 ಪೋಟೋ ಕಳವು ಪ್ರಕರಣ ಸಂಬಂಧ ಮಠ ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್ ಅನ್ನು ಪೊಲೀಸರು ಬಂಧಿಸಿದ್ದರು. ಅವನ್ನು ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಹೀಗೆ ಪೊಲೀಸ್ ಕಸ್ಟಡಿಯಲ್ಲಿದ್ದಂತ ವ್ಯಕ್ತಿಗೆ ಮೊಬೈಲ್ ನೀಡಿದಂತ ಪೊಲೀಸ್ ಕಾನ್ಸ್ ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ.
‘ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಗೆದ್ದು ತೋರಿಸಲಿ’ : ಮಾಜಿ ಸಚಿವ K.S ಈಶ್ವರಪ್ಪ ಸವಾಲ್
ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್ ಅವರನ್ನು ಮಠದಲ್ಲಿನ 47 ಪೋಟೋ ಕಳವು ಪ್ರಕರಣ ಆರೋಪಿಗಳಿಗೆ ಪ್ರಚೋದನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿತ್ತರು. ಈ ಬಳಿಕ ನ್ಯಾಯಾಲಯದ ಮುಂದೆ ಅವರನ್ನು ಹಾಜರು ಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಕೋರಿಕೊಂಡ ಕಾರಣ, ಕೋರ್ಟ್ ಪೊಲೀಸ್ ವಶಕ್ಕೆ ಎಸ್.ಕೆ ಬಸವರಾಜನ್ ನೀಡಲಾಗಿತ್ತು.
ಹೀಗೆ ಪೊಲೀಸ್ ಕಸ್ಟಡಿಯಲ್ಲಿದ್ದಂತ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್ ಗೆ ಚಿತ್ರದುರ್ಗ ನಗರ ಠಾಣೆ ಪೊಲೀಸ್ ಕಾನ್ಸ್ ಟೇಬಲ್ ರಂಗಸ್ವಾಮಿ ಎಂಬುವರು ಮೊಬೈಲ್ ಬಳಕೆಗೆ ಕೊಟ್ಟಿದ್ದರು. ಈ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಪಿಸಿ ರಂಗಸ್ವಾಮಿಯನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಶಬರಿಮಲೆಗೆ ತೆರಳೋ ಭಕ್ತರಿಗೆ ಗುಡ್ ನ್ಯೂಸ್: ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳ ಸಂಚಾರ