ಕಾಂಗ್ರೆಸ್ ಪಕ್ಷ ಸೇರಿ ಸಿ.ಪಿ.ಯೋಗೇಶ್ವರ್ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ: ಆರ್.ಅಶೋಕ್

ಬೆಂಗಳೂರು: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್‌ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ಯೋಗೇಶ್ವರ್‌ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್‌ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. … Continue reading ಕಾಂಗ್ರೆಸ್ ಪಕ್ಷ ಸೇರಿ ಸಿ.ಪಿ.ಯೋಗೇಶ್ವರ್ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ: ಆರ್.ಅಶೋಕ್