Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕುತ್ತಿಗೆಯ ನರಕ್ಕೆ ಸಣ್ಣ ಒತ್ತಡ ಬಿದ್ದರೂ ಜೀವಕ್ಕೆ ಅಪಾಯ’: ದೆಹಲಿ ಸಿಎಂ ರೇಖಾ ಗುಪ್ತಾ ಹಲ್ಲೆ ಪ್ರಕರಣದಲ್ಲಿ ಹೈಕೋರ್ಟ್ ಗಂಭೀರ ಎಚ್ಚರಿಕೆ!

10/04/2026 8:05 PM

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

ದೆಹಲಿಯ ಇರಾನ್ ರಾಯಭಾರ ಕಚೇರಿಯಲ್ಲಿ ಧ್ವಜ ಹಾರಿಸಿ ಕಂಬನಿ: ಖಮೇನಿ ನಿಧನದ 40ನೇ ದಿನದ ಸ್ಮರಣೆ!

10/04/2026 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿ.ಪಿ ಯೋಗೇಶ್ವರ್ ಜನಪ್ರಿಯ ನಾಯಕ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಸಿ.ಪಿ ಯೋಗೇಶ್ವರ್ ಜನಪ್ರಿಯ ನಾಯಕ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0924/10/2024 2:58 PM

ಚನ್ನಪಟ್ಟಣ: ಸಿಪಿ ಯೋಗೇಶ್ವರ್ ಜನಪ್ರಿಯ ನಾಯಕರಾಗಿದ್ದಾರೆ. ಅವರು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲ್ಲೋದರಲ್ಲಿ ಡೌಟೇ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಇಂದು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೆ ಮುನ್ನಾ ನಡೆದಂತ ರೋಡ್ ಶೋನಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ. ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.

ಮುಂದಿನ ದಿನಗಳಲ್ಲಿ ಮಿಕ್ಕ ವಿಚಾರಗಳನ್ನು ನಾನು ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳನ್ನು ನಾವು ನೋಡಬೇಕಿದೆ. ಚುನಾವಣೆ ಗೆಲ್ಲುವುದೊಂದೇ ನಮ್ಮ ಗುರಿ. ಲೋಕಸಭಾ ಚುನಾವಣೆ ಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಚನ್ನಪಟ್ಟಣದ ಜನತೆ 80 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ್ದರು. ಆದರೆ ಮಿಕ್ಕ ಕಡೆ ಕಡಿಮೆ ಮತಗಳು ಬಂದ ಕಾರಣಕ್ಕೆ ಗೆಲುವು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಕಾರ್ಯಕರ್ತರ ಕೈ ಬಿಡುವುದಿಲ್ಲ, ಅವರೊಟ್ಟಿಗೆ ನಾವಿದ್ದೇವೆ

ಡಿ.ಕೆ.ಶಿವಕುಮಾರ್ ಹಾಗೂ ಸುರೇಶ್ ಅವರನ್ನು ನಂಬಿ ಬಿಜೆಪಿ ಮತ್ತು ದಳದಿಂದ ಅನೇಕ ಕಾರ್ಯಕರ್ತರು ಬಂದಿದ್ದಾರೆ. ನೀವು ನಮ್ಮ ಕೈ ಬಲಪಡಿಸಿದ್ದೀರಿ, ಯಾವುದೇ ಕಾರಣಕ್ಕೂ ನಿಮ್ಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಡು ನೀರಿನಲ್ಲಿ ಕೈ ಬಿಡುವ ಪ್ರಶ್ನೆಯಿಲ್ಲ. ಭವಿಷ್ಯದಲ್ಲಿಯೂ ನಿಮ್ಮ ಜೊತೆ ನಾವಿರುತ್ತೇವೆ. ಯೋಗೇಶ್ವರ್ ಅವರ ಜೊತೆಯೂ ಇರುತ್ತೇವೆ.

ಚನ್ನಪಟ್ಟಣಕ್ಕೆ 500 ಕೋಟಿ ಅನುದಾನ ನೀಡಿದ್ದೇವೆ

ಚನ್ನಪಟ್ಟಣಕ್ಕೆ ಹೊಸರೂಪವನ್ನು ನೀಡುವುದಕ್ಕೆ ನಾವು ಬದ್ಧವಾಗಿದ್ದೇವೆ. ಕರ್ನಾಟಕದ ಅಭಿವೃದ್ದಿಯೇ ನಮ್ಮ ಸಂಕಲ್ಪ. ಈ ಗುರಿಯನ್ನಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ಚನ್ನಪಟ್ಟಣದ ಅಭಿವೃದ್ದಿಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಸುಮಾರು 500 ಕೋಟಿ ಅನುದಾನ ನೀಡಲಾಗಿದೆ.

ಜಾತ್ಯಾತೀತ ಎನ್ನುವ ಹೆಸರನ್ನು ಇಟ್ಟುಕೊಂಡಿರುವ ಜನತಾದಳ ಕೋಮುವಾದಿ ಬಿಜೆಪಿ ಜೊತೆ ಏಕೆ ಮೈತ್ರಿ ಮಾಡಿಕೊಂಡಿತು. ದಳದವರು ಅನುಕೂಲದ ರಾಜಕಾರಣಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಭಾವನನ್ನೇ ಬಿಜೆಪಿಯಿಂದ ಕಣಕ್ಕೆ ಇಳಿಸಿದರು.

ಚನ್ನಪಟ್ಟಣದ ಅಭಿವೃದ್ದಿ ನಮ್ಮಿಂದ ಸಾಧ್ಯ

ಚನ್ನಪಟ್ಟಣದ ಋಣವನ್ನು ತೀರಿಸಬೇಕು. ಈ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಜೊತೆ ಕೈ ಜೋಡಿಸಿ, ಜನಸೇವೆ ಮಾಡಬೇಕು ಎನ್ನುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈ ಚನ್ನಪಟ್ಟಣದಲ್ಲಿ ಇದ್ದರೇ ಅಭಿವೃದ್ದಿ ಸಾಧ್ಯ ಎಂದು ಹೇಳಿದರು.

ಚನ್ನಪಟ್ಟಣ ಉಪ ಚುನಾವಣೆಗೆ ‘ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ’ಯಾಗಿ JDS ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ

ಸಿ.ಟಿ.ರವಿ ಸಹಕಾರ ಯೋಗೇಶ್ವರ್ ಪರವಾಗಿದೆ: ಡಿ.ಕೆ.ಸುರೇಶ್ ಸ್ಪೋಟಕ ಹೇಳಿಕೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM2 Mins Read

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM2 Mins Read

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM1 Min Read
Recent News

‘ಕುತ್ತಿಗೆಯ ನರಕ್ಕೆ ಸಣ್ಣ ಒತ್ತಡ ಬಿದ್ದರೂ ಜೀವಕ್ಕೆ ಅಪಾಯ’: ದೆಹಲಿ ಸಿಎಂ ರೇಖಾ ಗುಪ್ತಾ ಹಲ್ಲೆ ಪ್ರಕರಣದಲ್ಲಿ ಹೈಕೋರ್ಟ್ ಗಂಭೀರ ಎಚ್ಚರಿಕೆ!

10/04/2026 8:05 PM

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

ದೆಹಲಿಯ ಇರಾನ್ ರಾಯಭಾರ ಕಚೇರಿಯಲ್ಲಿ ಧ್ವಜ ಹಾರಿಸಿ ಕಂಬನಿ: ಖಮೇನಿ ನಿಧನದ 40ನೇ ದಿನದ ಸ್ಮರಣೆ!

10/04/2026 7:59 PM

ಎಲೆಕ್ಟ್ರಿಕ್ ಕಾರಿಗೂ ದಂಡ ಹಾಕಿದ ಪೊಲೀಸರು! ಟಾಟಾ ತಿಯಾಗೊ ಇವಿಗೆ ‘ಮಾಲಿನ್ಯ ಪತ್ರ’ ಕೇಳಿ ಪೇಚಿಗೆ ಸಿಲುಕಿದ ಇಲಾಖೆ!

10/04/2026 7:49 PM
State News
KARNATAKA

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

By kannadanewsnow0910/04/2026 8:00 PM KARNATAKA 2 Mins Read

ಶಿವಮೊಗ್ಗ: ಛಲವೊಂದಿದ್ದರೆ ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಯಶಸ್ಸು ಗಳಿಸಬಹುದು ಎಂಬುದನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವಿದ್ಯಾರ್ಥಿನಿ ಸ್ಪೂರ್ತಿ ಆರ್.…

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.