ಹುಬ್ಬಳ್ಳಿ: ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆ ಮಾಡಿದ್ದರು. ಆದರೇ ಅವರಿಗೆ ಬಿಜೆಪಿ ನೀಡುವುದಿಲ್ಲ. ಜೆಡಿಎಸ್ ಅಭ್ಯರ್ಥಿಗಳೇ ಆ ಕ್ಷೇತ್ರದಲ್ಲಿ ನಿಲ್ಲುವುದು ಖಚಿತವಾಗಿತ್ತು. ಈ ಸುಳಿವು ಅರಿತಂತ ಸಿಪಿ ಯೋಗೇಶ್ವರ್ ಅವರು, ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಇಂದು ಹುಬ್ಬಳ್ಳಿಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿದಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಂತ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆಯನ್ನು ಅಧಿಕೃತವಾಗಿ ನೀಡಿದ್ದಾರೆ.
ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?
BREAKING : ‘UPSC ಎಂಜಿನಿಯರಿಂಗ್ ಪರೀಕ್ಷೆ 2025, ಮುಖ್ಯ ಪರೀಕ್ಷೆ’ ಮುಂದೂಡಿಕೆ |UPSC Exam