ಬೆಂಗಳೂರು : ಬೆಂಗಳೂರಿನಲ್ಲಿ ಪಟಾಕಿ ಸಿಡಿಸಲು ಹೋಗಿ ಯುವಕನೋರ್ವ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಪಟಾಕಿ ಸಿಡಿಸಲು ಹೋಗಿ ಯುವಕನ ಕಣ್ಣಿಗೆ ಗಂಭೀರ ಗಾಯವಾಗಿದ್ದು, ಮಿಂಟೋ ಆಸ್ಪತ್ರೆಯ ವಿಶೇಷ ವಾರ್ಡ್ ನಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯುವಕನ ಕಣ್ಣಿನ ಕಪ್ಪು ಪೊರೆಗೆ ಡ್ಯಾಮೇಜ್ ಆಗಿದ್ದು, ಆತನಿಗೆ ದೃಷ್ಟಿ ಬರುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಲು ಹೋಗಿ ಯುವಕ ಕಣ್ಣು ಕಳೆದುಕೊಂಡಿದ್ದು, ಯುವಕರು ಪಟಾಕಿ ಸಿಡಿಸುವಾಗ ಜಾಗರೂಕತೆಯಿಂದ ಇರಬೇಕು. ಇಲ್ಲವಾದಲ್ಲಿ ಇಂತಹ ಅವಘಡಗಳು ಸಂಭವಿಸುತ್ತದೆ.
BREAKING NEWS: ಮಹಿಳೆಗೆ ಕಪಾಳಮೋಕ್ಷ ಪ್ರಕರಣ: ಸಚಿವ ವಿ. ಸೋಮಣ್ಣ ವಿರುದ್ಧ ಮಹಿಳಾ ಆಯೋಗಕ್ಕೆ ದೂರು