ಬೆಳಗಾವಿ : ಒಕ್ಕಲಿಗರು, ಲಿಂಗಾಯಿತರಿಗೆ ಪ್ರತ್ಯೇಕ ಕೆಟಗರಿ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಅಸ್ತು ಎಂದಿದ್ದು, ಈ ಮೂಲಕ ಲಿಂಗಾಯತರು ಹಾಗೂ ಒಕ್ಕಲಿಗರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.
3 ಎ ಕೆಟಗರಿಯಲ್ಲಿದ್ದ ಒಕ್ಕಲಿಗರಿಗೆ ಹೊಸದಾಗಿ 2 ಸಿ ಕ್ಯಾಟಗರಿ ಹಾಗೂ 3 ಬಿಯಲ್ಲಿದ್ದ ಲಿಂಗಾಯತರಿಗೆ ಹೊಸದಾಗಿ 2 ಡಿ ಕ್ಯಾಟಗರಿ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ಮೂಲಕ ಒಕ್ಕಲಿಗರು ಹಾಗೂ ಲಿಂಗಾಯಿತರಿಗೆ ಸರ್ಕಾರ ಹೊಸ ಕೆಟಗರಿ ರಚನೆ ಮಾಡಿದೆ.
ಇನ್ನೂ, ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2ಎ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಪಂಚಮಸಾಲಿ ಮೀಸಲಾತಿ’ ಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗಿದೆ.
BREAKING NEWS : ‘ಬೋಧ್ ಗಯಾ’ದಲ್ಲಿ ‘ದಲೈ ಲಾಮಾ’ ಮೇಲೆ ಗೂಢಚರ್ಯೆ ; ಚೀನಾ ಮಹಿಳೆ ಅರೆಸ್ಟ್ |Chinese woman
BIGG BREAKING NEWS : ಪಂಚಮಸಾಲಿ ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : 2ಎ ಮೀಸಲಾತಿ ನೀಡಲು ಸಚಿವ ಸಂಪುಟ ಸಭೆ ಅಸ್ತು