ಬೆಂಗಳೂರು: ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಅಂತ ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಚಾಮರಾಜನಗರದ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ನಡಿ ತಮ್ಮ ಉದ್ಯಮ ಆರಂಭಿಸಿದ್ದು, ಕಾಮಗಾರಿ ಭರದಿಂದ ಸಾಗಿದೆ. ಇಲ್ಲಿ ಅವರು ಆರಂಭದಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಮುಂದಾಗಿದ್ದರು. ಇದೀಗ ಹೂಡಿಕೆ ಸಾವಿರ ಕೋಟಿ ರೂಪಾಯಿ ಮುಟ್ಟುತ್ತಿದ್ದು, ಮುಂದಿನ ದಿನಗಳಲ್ಲಿ ಇದು 1,400 ಕೋಟಿ ರೂಪಾಯಿ ಆಗಲಿದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಮುತ್ತಯ್ಯ ಮುರಳೀಧರನ್ ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.