ಹಾಸನ: ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗಿರುವ ಲೈಂಗಿಕ ಹಿಂಸೆಯ/ ದೌರ್ಜನ್ಯದ ಖಾಸಗಿ ವೀಡಿಯೋ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿಯುಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆ ಹಚ್ಚಲು ಹಾಗೂ ಆರೋಪಿಯ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಕೋರಿದ ಮೇರೆಗೆ ಹಾಗೂ ಸಂತ್ರಸ್ಥ ಮಹಿಳೆಯ ಮೇಲೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರವರು ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಸಿ.ಐ.ಡಿ. ಸೈಬರ್ ಕ್ರೈಂ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ಸಂಖ್ಯೆ: 02/2024 ಪ್ರಕರಣದ ಸಮಗ್ರ ತನಿಖೆಗಾಗಿ ಹಾಗೂ ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೆÇಲೀಸ್ ಠಾಣೆಗಳಲ್ಲಿ ದಾಖಲಾದ/ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ಉನ್ನತ ಮಟ್ಟದಲ್ಲಿ ಹಿರಿಯ ಪೆÇಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಸಂಖ್ಯೆ ಹೆಚ್‍ಡಿ 51 ಸಿಒಡಿ 2024 ಬೆಂಗಳೂರು ದಿನಾಂಕ:28.04.2024 ರಂತೆ ಸಿಐಡಿಯಲ್ಲಿ ಒಂದು ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಗೆ ಆದೇಶ ಮಾಡಲಾಗಿರುತ್ತದೆ.
ಸಿ.ಐ.ಡಿ. ಸೈಬರ್ ಕ್ರೈಂ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಮೊನಂ-02/2024ರ ಪ್ರಕರಣವು ಸರ್ಕಾರದ ಆದೇಶದಂತೆ ರಚನೆಯಾದ ಎಸ್‍ಐಟಿ ತಂಡಕ್ಕೆ ವರ್ಗಾವಣೆಯಾದ ನಂತರ ಎಸ್‍ಐಟಿಯ ತನಿಖಾಧಿಕಾರಿಗಳು ಸದರಿ ಪ್ರಕರಣದ ತನಿಖೆ ಕೈಗೊಂಡು ಮೇಲಾಧಿಕಾರಿಗಳಿಂದ ಸೂಕ್ತ ಸಲಹೆ, ಸೂಚನೆ ಮತ್ತು ಮಾರ್ಗದರ್ಶನ ಪಡೆದುಕೊಂಡು ತನಿಖಾ ಕಾಲದಲ್ಲಿ ಪ್ರಕರಣಕ್ಕೆ ಪೂರಕವಾದ ಒಟ್ಟು 113 ಸಾಕ್ಷಿದಾರರುಗಳನ್ನು ಪ್ರಾಸಿಕ್ಯೂಷನ್‍ಪರ ಸಾಕ್ಷಿದಾರರನ್ನಾಗಿ ಪರಿಗಣಿಸಿ ವಿಚಾರಣೆಗೆ ಒಳಪಡಿಸಿ ಕಲಂ- 161ಸಿಆರ್‍ಪಿಸಿ ರೀತ್ಯಾ ದಾಖಲಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡು ಪ್ರಕರಣದ ಸಂತ್ರಸ್ಥೆ ಮತ್ತು ಪ್ರಕರಣದ ಪ್ರಮುಖ ಸಾಕ್ಷಿದಾರರ ಹೇಳಿಕೆಗಳನ್ನು ಕಲಂ-164 ಸಿಆರ್‍ಪಿಸಿ ರೀತ್ಯಾ ದಾಖಲಿಸಿ, ಹಲವು ಕಡೆ ಕೃತ್ಯಕ್ಕೆ ಸಂಬಂಧಿಸಿದಂತೆ ಸ್ಥಳ ಮತ್ತು ಅಮಾನತ್ತು ಮಹಜರ್ ಕ್ರಮಗಳನ್ನು ಜರುಗಿಸಿ ಜೈವಿಕ, ಭೌತಿಕ, ವೈಜ್ಞಾನಿಕ, ಮೊಬೈಲ್, ಡಿಜಿಟಲ್ ಹಾಗೂ ಇತರೆ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಸಂಗ್ರಹಿಸಿದ ಸಾಕ್ಷ್ಯಾಧಾರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ಪರೀಕ್ಷೆಗೆ ಒಳಪಡಿಸಿ, ಪ್ರಯೋಗಾಲಯ ತಜ್ಞರ ಪರೀಕ್ಷಾ ವರದಿಗಳನ್ನು ಸ್ವೀಕರಿಸಿ, ತಜ್ಞರ ಅಭಿಪ್ರಾಯಗಳನ್ನು ಪಡೆದು ಆರೋಪಿ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರವರ ವಿರುದ್ದ ಒಟ್ಟು 1652 ಪುಟಗಳ ಸಮಗ್ರ ದೋμÁರೋಪಣ ಪಟ್ಟಿಯನ್ನು ಸಿದ್ದಪಡಿಸಿ ಬೆಂಗಳೂರಿನ ಸಿಸಿಹೆಚ್-42 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಸೂಪರಿಂಟೆಂಡೆಂಟ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.