ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ( Ex CM BS Yediyurappa ) ಮತ್ತೆ ಸಂಕಷ್ಟ ಎದುರಾಗಿದೆ. ಹೌದು, ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಅಕ್ರಮ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ ಗೆ ಯಡಿಯೂರಪ್ಪಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಈ ಬಗ್ಗೆ ನಾವು ವಿಚಾರಣೆ ನಡೆಸುವುದಿಲ್ಲ ಎಂದು ಅರ್ಜಿ ತಿರಸ್ಕರಿಸಿದೆ. ವಿಚಾರಣೆಗೆ ಸುಪ್ರೀಂಕೋರ್ಟ್ ನ ಸಿಜೆಐ ಯು.ಯು ಲಲಿತ್ ನಿರಾಕರಿಸಿದ್ದಾರೆ, ದೀಪಾವಳಿ ನಂತರ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಈ ಮೂಲಕ ಬಿಎಸ್ವೈಗೆ ಶಾಕ್ ಎದುರಾಗಿದೆ. ಹತ್ತು ವರ್ಷಗಳ ಹಿಂದಿನ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್ ಯಡಿಯೂರಪ್ಪ ಹಾಗೂ ಮುರುಗೇಶ್ ನಿರಾಣಿ, ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು,
ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ ಕಾರಿಡಾರ್ ನಿರ್ಮಾಣಕ್ಕಾಗಿ ಮಾಡಿದ್ದ ಭೂಮಿ ಅಕ್ರಮ ಡಿನೋಟಿಫಿಕೇಶನ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಏಪ್ರಿಲ್ 19ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಜಯಂತ್ ಕುಮಾರ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 13 (1) (ಡಿ) ಮತ್ತು 13 (2)ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಮನ್ಸ್ ಜಾರಿ ಮಾಡಲು ಆದೇಶ ಹೊರಡಿಸಿದ್ದರು.