ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ದುರಂತದಿಂದ ಆರ್ ಸಿ ಬಿಯ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆ ಸಂಬಂಧ ವಿವರಣೆ ನೀಡುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ.
ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ದೆಹಲಿಗೆ ಬರುವಂತೆ ಸೂಚಿಸಿದೆ. ಹೀಗಾಗಿ ನಾಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣಿಸಲಿದ್ದಾರೆ.
ದೆಹಲಿಯಲ್ಲಿ ನಾಳೆ ರಾಹುಲ್ ಗಾಂಧಿ ಜೊತೆಗೆ ಸಿಎಂ, ಡಿಸಿಎಂ ಸಭೆ ನಡೆಸಲಿದ್ದಾರೆ. ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದ ಬಗ್ಗೆ ಗಂಭೀರವಾದಂತ ಚರ್ಚೆ ನಡೆಯಲಿದೆ. ಕಾಲ್ತುಳಿತ ದುರಂತದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದ್ದು, ನಾಳೆ ದುರಂತದ ಬಗ್ಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಂದ ಮಾಹಿತಿ ಪಡೆಯಲಿದೆ.
RCB ಗೆದ್ದ ನಂತ್ರ ಮೆರವಣಿಗೆಗೆ ಅವಕಾಶ ನೀಡುವಂತೆ ಬಿಜೆಪಿ, ಜೆಡಿಎಸ್ ಕೇಳಿತ್ತು, ಈಗ ಯೂಟರ್ನ್: ಡಿಕೆಶಿ ಕಿಡಿ
Watch Video: ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ | Kerala coast