Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗಳತ್ತ ಮಹಿಳೆಯರ ಒಲವು: NFHS-6 ವರದಿಯಲ್ಲಿ ಮಹತ್ವದ ಅಂಶ!

ALERT : ಮನೆಯಲ್ಲಿ `AC’ ಬಳಸುವವರೇ ಎಚ್ಚರ : ಎಸಿ ಸ್ಪೋಟಗೊಂಡು ನಿವೃತ್ತ `IAS’ ಅಧಿಕಾರಿ ಸಾವು.!

ಬೆಂಗಳೂರು ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! Namma Metro

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ, ಟೀಕಾಕಾರರಿಗೆ ಕ್ಯಾಮೆರಾಗಳೇ ಉತ್ತರಿಸುತ್ತವೆ: ಡಿಕೆಶಿ
KARNATAKA

ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ, ಟೀಕಾಕಾರರಿಗೆ ಕ್ಯಾಮೆರಾಗಳೇ ಉತ್ತರಿಸುತ್ತವೆ: ಡಿಕೆಶಿ

By ವಸಂತ ಬಿ ಈಶ್ವರಗೆರೆ

ಸಕಲೇಶಪುರ : “ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ನಂಬಿದ್ದೇನೆ. ಈ ಯೋಜನೆ ಬಗ್ಗೆ ಟೀಕೆ ಮಾಡಿದವರಿಗೆ ಮಾಧ್ಯಮಗಳ ಕ್ಯಾಮೆರಾಗಳೇ ಉತ್ತರ ನೀಡುತ್ತವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಕಲೇಶಪುರದ ದೊಡ್ಡನಗರದ ಡಿ.ಸಿ- 3 ಪಂಪ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

“ಕರ್ನಾಟಕ ರಾಜ್ಯ ಇತಿಹಾಸದಲ್ಲಿ ಈ ಘಳಿಗೆಯಲ್ಲಿ ಒಂದು ವಿಶಿಷ್ಟ ಮೈಲಿಗಲ್ಲು ಸ್ಥಾಪನೆಯಾಗುತ್ತಿದೆ. ಆಲಮಟ್ಟಿ ಯೋಜನೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಶಂಕುಸ್ಥಾಪನೆ ಮಾಡಿದ್ದರು. 2006ರಲ್ಲಿ ಅಬ್ದುಲ್ ಕಲಾಂ ಅವರು ಯೋಜನೆ ಉದ್ಘಾಟನೆ ಮಾಡಿದ್ದರು.

ಆಲಮಟ್ಟಿ ಯೋಜನೆ ಜಾರಿ ನಂತರ ಎತ್ತಿನಹೊಳೆ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಯಾಗಿದೆ. 2014 ಮಾರ್ಚ್ 5ರಂದು ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈಗ ಅವರ ನೇತೃತ್ವದಲ್ಲಿ ಈ ಯೋಜನೆ ಉದ್ಘಾಟನೆಯಾಗುತ್ತಿದೆ. 10 ವರ್ಷಗಳು ಕಳೆದಿದ್ದು, ಬೇಕಾದಷ್ಟು ಟೀಕೆ ಟಿಪ್ಪಣಿಗಳು ಕೇಳಿ ಬಂದವು. ಎಲ್ಲವನ್ನೂ ಮೆಟ್ಟಿನಿಂತು ಯೋಜನೆ ಜಾರಿಯಾಗುತ್ತಿದೆ. ಈ ಯೋಜನೆಗೆ ಬೇರೆ ಸರ್ಕಾರಗಳು ಪ್ರಯತ್ನಿಸಿವೆ. ನಾನು ಯಾರನ್ನೂ ದೂಷಿಸುವುದಿಲ್ಲ” ಎಂದು ತಿಳಿಸಿದರು.

“ನಾನು ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಈ ಯೋಜನೆಯನ್ನು ಪೂರ್ಣಗೊಳಿಸಲೇಬೇಕು ಎಂದು ತೀರ್ಮಾನ ಮಾಡಿ ಆದ್ಯತೆ ಮೇರೆಗೆ ಕೆಲಸ ಮಾಡಲಾಗಿದೆ. ಪರಿಣಾಮ ಪಶ್ಚಿಮ ಘಟ್ಟಗಳಿಂದ ಬಯಲುಸೀಮೆಯ ಪ್ರದೇಶಕ್ಕೆ ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ. ಈಗ 123 ಕಿ.ಮೀ ದೂರದ ವಾಣಿ ವಿಲಾಸ ಅಣೆಕಟ್ಟಿಗೆ ನೀರು ಸೇರುತ್ತಿದೆ. ಈ ಯೋಜನೆಯ ಕಾಲುವೆ ಹಾದು ಹೋಗುವ ಮಧ್ಯ ಭಾಗಗಳಲ್ಲಿ ಅರಣ್ಯ ಪ್ರದೇಶದಲ್ಲಿ ಒಂದಷ್ಟು ಕೆಲಸ ಬಾಕಿ ಇವೆ. ಕೆಲವೇ ತಿಂಗಳುಗಳಲ್ಲಿ ಆ ಕೆಲಸಗಳು ಪೂರ್ಣಗೊಳ್ಳಲಿದ್ದು, ನಂತರ ತುಮಕೂರಿಗೆ ಈ ನೀರನ್ನು ತೆಗೆದುಕೊಂಡು ಹೋಗಲಾಗುವುದು” ಎಂದು ವಿವರಿಸಿದರು.

“ಮಾರ್ಗ ಮಧ್ಯೆ ನೀರನ್ನು ಪೋಲು ಮಾಡಬಾರದು ಎಂದು ಹೊಸ ಕಾನೂನು ತರಲಾಗಿದೆ. ಈ ಯೋಜನೆಗೆ ಒಟ್ಟು ₹23 ಸಾವಿರ ಕೋಟಿ ವೆಚ್ಚದ ಅಂದಾಜು ಮಾಡಲಾಗಿದೆ. ಈ ಯೋಜನೆಯಲ್ಲಿ 8 ವಿಯರ್ ಗಳ ಮೂಲಕ ನೀರನ್ನು ಎತ್ತಿ ಹರಿಸಲಾಗುವುದು. ಶುಕ್ರವಾರ 1,500 ಕ್ಯೂಸೆಕ್ ನೀರನ್ನು ಹರಿಸಲಾಗುವುದು. ಆಮೂಲಕ ಗೌರಿ ಹಬ್ಬದ ದಿನ ಗಂಗೆಗೂ ಪೂಜೆ ಮಾಡಲಾಗುವುದು. ಇಬ್ಬರೂ ದೇವತೆಗಳನ್ನು ಒಟ್ಟಾಗಿ ಪೂಜಿಸುತ್ತಿದ್ದೇವೆ” ಎಂದು ತಿಳಿಸಿದರು.

“ಈ ಯೋಜನೆ ಕುರಿತಾಗಿ ಅನೇಕ ನಾಯಕರು ಸದನ ಹಾಗೂ ಸಂಸತ್ತಿನಲ್ಲಿ ಮಾತನಾಡಿದ್ದಾರೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲಾ ಪಕ್ಷದ ನಾಯಕರನ್ನು ಆಹ್ವಾನಿಸುತ್ತಿದ್ದೇವೆ. ರಾಜ್ಯದ 224 ಕ್ಷೇತ್ರದವರಿಗೂ ಆಹ್ವಾನ ನೀಡಲು ಆಗುವುದಿಲ್ಲ. ಆದರೆ ಫಲಾನುಭವಿ ಜಿಲ್ಲೆಗಳ ನಾಯಕರಿಗೆ ಆಹ್ವಾನ ನೀಡಿದ್ದೇವೆ. ಯಾರನ್ನಾದರೂ ಆಹ್ವಾನಿಸದೇ ತಪ್ಪಾಗಿದ್ದರೆ ಮುಂದೆ ಸರಿಪಡಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಶುಭ ಗಳಿಗೆಯಲ್ಲಿ ಒಳ್ಳೆಯ ಮಾತುಗಳನ್ನು ಮಾತನಾಡೋಣ

ಈ ಯೋಜನೆ ಜಾರಿ ಸಾಧ್ಯವೇ ಇಲ್ಲ ಎಂದು ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದರು ಎಂದು ಕೇಳಿದಾಗ, “ಬಿಜೆಪಿಯವರ ಟೀಕೆಗೆ ನಾನು ಈಗ ಉತ್ತರ ನೀಡುವುದಿಲ್ಲ. ನಿಮ್ಮ ಕ್ಯಾಮೆರಾಗಳೇ ಅವರಿಗೆ ಉತ್ತರ ನೀಡುತ್ತವೆ. ಅವರಿಗೆ ಅಧಿವೇಶನದಲ್ಲಿ ಉತ್ತರ ನೀಡುತ್ತೇನೆ. ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ವಿಘ್ನಗಳ ನಿವಾರಕ ವಿನಾಯಕನನ್ನು ಪ್ರಾರ್ಥಿಸುತ್ತೇನೆ. ಈ ಶುಭ ಸಂದರ್ಭದಲ್ಲಿ ಒಳ್ಳೆಯ ವಿಚಾರಗಳನ್ನಷ್ಟೇ ಮಾತನಾಡೋಣ. ನುಡಿದರೆ ಮುತ್ತಿನ ಹಾರದಂತಿರಬೇಕು ಎಂಬ ಬಸವಣ್ಣನವರ ವಚನದಂತೆ ನಮ್ಮ ಮಾತುಗಳು ಉತ್ತಮವಾಗಿರಲಿ. ಶುಭ ಸಂದರ್ಭದಲ್ಲಿ ಅಶುಭದ ಮಾತುಗಳು ಬೇಡ” ಎಂದು ತಿಳಿಸಿದರು.

ಈ ಯೋಜನೆಯಲ್ಲಿ ನಿರೀಕ್ಷಿತ ಮಟ್ಟದ ನೀರು ಸಿಗುವುದೇ ಎಂದು ಕೇಳಿದಾಗ, “ಕೆಲವರಲ್ಲಿ ಇಂತಹ ಅನುಮಾನವಿದೆ. ಈ ನೀರು ಸಾಕಾಗದೆ ಹೋದರೆ ಎಂಬ ಆತಂಕವಿದೆ. ನಾವು ಕುಡಿಯುವ ಉದ್ದೇಶಕ್ಕೆ 14 ಟಿಎಂಸಿ ಹಾಗೂ ಕೆರೆಗಳ ತುಂಬಿಸಲು ಸುಮಾರು 10 ಟಿಎಂಸಿ. ಒಟ್ಟು 24 ಟಿಎಂಸಿ ನೀರನ್ನು ತೆಗೆಯುವ ಗುರಿ ಇದೆ. ಈಗಾಗಲೇ ಪ್ರಯೋಗಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ” ಎಂದು ತಿಳಿಸಿದರು.

24 ಟಿಎಂಸಿ ನೀರನ್ನು ಎತ್ತಲು ಸಾಧ್ಯವೇ ಎಂದು ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಈಗ ಬೇರೆಯವರ ಟೀಕೆಗಳಿಗೆ ಉತ್ತರ ನೀಡುವುದಿಲ್ಲ. ಟೀಕೆ ಮಾಡುವವರು ಅಧಿಕಾರದಲ್ಲಿ ಇದ್ದಾಗ ಯಾವುದನ್ನೂ ಮಾತನಾಡಲಿಲ್ಲ. ಈ ವರ್ಷ ಈಗಾಗಲೇ 15 ಟಿಎಂಸಿ ನೀರನ್ನು ಎತ್ತಲಾಗಿದೆ. ಡಿಸೆಂಬರ್ ವೇಳೆಗೆ ತುಮಕೂರು ಗಡಿವರೆಗೂ 5 ಟಿಎಂಸಿ ನೀರನ್ನು ಹರಿಸಲು ಗುರಿ ಹೊಂದಿದ್ದೇವೆ. ನಮ್ಮ ಇಲಾಖೆಯಲ್ಲಿ ಅತ್ಯುತ್ತಮ ಅಧಿಕಾರಿಗಳು ಇದ್ದಾರೆ” ಎಂದು ತಿಳಿಸಿದರು.

ಹೋಮ ಹವನ ಮಾಡಲಾಗುವುದೇ ಎಂದು ಕೇಳಿದಾಗ, “ಹೋಮ ಹವನ ಮಾಡಬೇಕು, ಕುಂಬಳಕಾಯಿ ಬಲಿ ನೀಡಬೇಕು. ದೇವರಲ್ಲಿ ಪ್ರಾರ್ಥನೆ ಮಾಡಿ ಯೋಜನೆಗೆ ಚಾಲನೆ ನೀಡಬೇಕು. ನಮ್ಮ ಧರ್ಮ, ಸಂಸ್ಕೃತಿ ಕಾಪಾಡಬೇಕು. ಗಂಗೆ ಪೂಜೆ, ಬಾಗಿನ ಅರ್ಪಣೆ ಎಲ್ಲವೂ ನಮ್ಮ ಧರ್ಮ, ಸಂಸ್ಕೃತಿಯ ಭಾಗವಲ್ಲವೇ” ಎಂದು ತಿಳಿಸಿದರು.

ನನ್ನ ಜೀವನದ ಹೆಮ್ಮೆಯ ಕ್ಷಣಗಳಲ್ಲಿ ಇದು ಒಂದು

ನಿಮ್ಮ ರಾಜಕೀಯ ಜೀವನದಲ್ಲಿ ಈ ಘಳಿಗೆ ಎಷ್ಟು ಮುಖ್ಯ ಎಂದು ಕೇಳಿದಾಗ, “ನನ್ನ ರಾಜಕೀಯ ಜೀವನದ ಒಂದು ಮೈಲಿಗಲ್ಲು. ಅತ್ಯಂತ ಹೆಮ್ಮೆಯ ಕ್ಷಣಗಳಲ್ಲಿ ಇದು ಒಂದು. ನನಗೆ ಇಂತಹ ಅವಕಾಶ ಕೊಟ್ಟ ಕನ್ನಡನಾಡಿನ ಜನರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಮಹಾದಾಯಿ ಸರ್ವಪಕ್ಷ ಸಭೆ, ದೆಹಲಿಗೆ ನಿಯೋಗ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಾಧ್ಯತೆ

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

BIG NEWS: ಭಾಗ್ಯಲಕ್ಷ್ಮಿ ಯೋಜನೆಯಡಿ ‘ಉಚಿತ ಸೀರೆ ಹಂಚಿಕೆ’ಯಲ್ಲಿ 23 ಕೋಟಿ ಹಗರಣ: ರಮೇಶ್ ಬಾಬು ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

ಬೆಂಗಳೂರು ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! Namma Metro

2 Mins Read

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

3 Mins Read

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

2 Mins Read
Recent News

ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗಳತ್ತ ಮಹಿಳೆಯರ ಒಲವು: NFHS-6 ವರದಿಯಲ್ಲಿ ಮಹತ್ವದ ಅಂಶ!

ALERT : ಮನೆಯಲ್ಲಿ `AC’ ಬಳಸುವವರೇ ಎಚ್ಚರ : ಎಸಿ ಸ್ಪೋಟಗೊಂಡು ನಿವೃತ್ತ `IAS’ ಅಧಿಕಾರಿ ಸಾವು.!

ಬೆಂಗಳೂರು ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! Namma Metro

ಸಾರ್ವಜನಿಕರೇ ಗಮನಿಸಿ : ಜೂನ್.1ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | New Rules from June.1

State News
KARNATAKA

ಬೆಂಗಳೂರು ಮೆಟ್ರೋ ಪ್ರಯಾಣಿಕರೇ ಗಮನಕ್ಕೆ: ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ! Namma Metro

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜಧಾನಿಯ ಮೆಟ್ರೋ ಪ್ರಯಾಣಿಕರು ಈ ಭಾನುವಾರ (ಮೇ 31, 2026) ಬೆಳಗ್ಗೆ ಸಂಚರಿಸುವಾಗ ಕೊಂಚ ಎಚ್ಚರ ವಹಿಸಬೇಕಾಗಿದೆ. ನಮ್ಮ…

GOOD NEWS: ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 30,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

Guest Teacher: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 30,337 ಅಥಿತಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.