ಬೆಂಗಳೂರು : ಹಿಂಗಾರು ಮಳೆ ಅವಧಿಯಲ್ಲಿ ರಾಜ್ಯಾದ್ಯಂತ 1,58,087 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಮುಂದಿನ ಒಂದು ವಾರದಲ್ಲಿ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೂ ಪರಿಹಾರ ಹಣ ಜಮೆಯಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಶುಕ್ರವಾರ ವಿಕಾಸ ಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ ಹಿಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬೆಳೆ ಹಾನಿ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಜಂಟಿ ಸಮೀಕ್ಷೆ ನಡೆಸಲಾಗಿದ್ದು, ಡೇಟಾ ಎಂಟ್ರಿ ಕೆಲಸಗಳೂ ಮುಕ್ತಾಯದ ಹಂತದಲ್ಲಿದೆ. ರೂ. 120 ಕೋಟಿ ವರೆಗೆ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಮುಂದಿನ ಒಂದು ವಾರದಲ್ಲಿ ಎಲ್ಲಾ ರೈತರ ಖಾತೆಗಳಿಗೂ ಹಣ ಜಮೆ ಆಗಲಿದೆ” ಎಂದು ತಿಳಿಸಿದರು.
ಮುಂದುವರೆದು, “ಜಿಲ್ಲಾಧಿಕಾರಿಗಳ ಖಾತೆಯಲ್ಲೇ ರೂ. 642 ಕೋಟಿ ಹಣ ಲಭ್ಯವಿದ್ದು, ಈ ಹಣದಲ್ಲೇ ಪರಿಹಾರ ಶೀಘ್ರ ವಿತರಿಸಲಾಗುವುದು. ಮುಂಗಾರು ಹಂಗಾಮಿನಲ್ಲಿ ಸುಮಾರು 77,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿತ್ತು. ಕೆಲವಡೆ ಮನೆ ಕುಸಿದಿದ್ದವು, ಕೆಲವೆಡೆ ಪ್ರಾಣ ಹಾನಿಯಂತಹ ಘಟನೆಗಳೂ ಸಂಭವಿಸಿದ್ದವು. ಇದಕ್ಕೆ ಸಂಬಂಧಿಸಿದಂತೆ ಒಟ್ಟಾರೆ ರೂ.162 ಕೋಟಿ ಹಣವನ್ನು ಪರಿಹಾರವಾಗಿ ರೈತರ ಖಾತೆಗಳಿಗೆ ಈಗಾಗಲೇ ಜಮೆ ಮಾಡಲಾಗಿದೆ” ಎಂದರು.
Good News: ರಾಜ್ಯದ `ಬಗರ್ ಹುಕುಂ’ ರೈತರಿಗೆ ಭರ್ಜರಿ ಗುಡ್ ನ್ಯೂಸ್: ಡಿ.15ರೊಳಗೆ ‘ಸಾಗುವಳಿ ಚೀಟಿ’ ವಿತರಣೆ