ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನಾಮಪತ್ರ ಸಲ್ಲಿಸಿದರು. ರಾಹುಲ್ ಗಾಂಧಿ ಸಲ್ಲಿಸಿದ ಅಫಿಡವಿಟ್ ಪ್ರಕಾರ, ಅವರು 4.3 ಕೋಟಿ ರೂ.ಗಳ ಷೇರು ಮಾರುಕಟ್ಟೆ ಹೂಡಿಕೆ, 3.81 ಕೋಟಿ ರೂ.ಗಳ ಮ್ಯೂಚುವಲ್ ಫಂಡ್ ಠೇವಣಿ ಮತ್ತು 26.25 ಲಕ್ಷ ರೂ.ಗಳನ್ನು ಬ್ಯಾಂಕ್ ಖಾತೆಯಲ್ಲಿ ಹೊಂದಿದ್ದಾರೆ.
2022-23ರ ಹಣಕಾಸು ವರ್ಷದಲ್ಲಿ 55,000 ರೂ ನಗದು ಮತ್ತು ಒಟ್ಟು ಆದಾಯ 1,02,78,680 ರೂ (1.02 ಕೋಟಿ ರೂ.) ಎಂದು ರಾಹುಲ್ ಗಾಂಧಿ ಘೋಷಿಸಿದರು.ರಾಹುಲ್ ಗಾಂಧಿ ಬಳಿ 15.2 ಲಕ್ಷ ಮೌಲ್ಯದ ಚಿನ್ನದ ಬಾಂಡ್ಗಳಿವೆ. ಅವರು ರಾಷ್ಟ್ರೀಯ ಉಳಿತಾಯ ಯೋಜನೆಗಳು, ಅಂಚೆ ಉಳಿತಾಯ ಮತ್ತು ವಿಮಾ ಪಾಲಿಸಿಗಳಲ್ಲಿ 61.52 ಲಕ್ಷ ರೂ.ಗಳ ಹೂಡಿಕೆ ಮಾಡಿದ್ದಾರೆ.
ಅಫಿಡವಿಟ್ ಪ್ರಕಾರ, ಮಾಜಿ ಕಾಂಗ್ರೆಸ್ ಮುಖ್ಯಸ್ಥರ ಆಭರಣ ಆಸ್ತಿಯ ಮೌಲ್ಯ 4.2 ಲಕ್ಷ ರೂ.ಅವರ ಚರಾಸ್ತಿಯ ಒಟ್ಟು ಮೌಲ್ಯ 9.24 ಕೋಟಿ ರೂ., ಸ್ಥಿರಾಸ್ತಿಯ ಒಟ್ಟು ಮೌಲ್ಯ 11.14 ಕೋಟಿ ರೂ. ಅವರ ಒಟ್ಟು ಆಸ್ತಿಯ ಮೌಲ್ಯ 20 ಕೋಟಿ ರೂ.ಗಿಂತ ಹೆಚ್ಚು ಎಂದು ನಾಮಪತ್ರದ ಜೊತೆಗೆ ಸಲ್ಲಿಸಲಾದ ವಿವರಗಳಲ್ಲಿ ತಿಳಿಸಲಾಗಿದೆ.