ನವದೆಹಲಿ: ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಸಿಐಎಸ್ಎಫ್ನಂತಹ ಅರೆಸೈನಿಕ ಪಡೆಗಳಲ್ಲಿನ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಫೆಬ್ರವರಿ 20 ರಿಂದ ಮಾರ್ಚ್ 7 ರವರೆಗೆ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ (ಎಂಎಚ್ಎ) ಭಾನುವಾರ ತಿಳಿಸಿದೆ.
ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಹೇಳಿಕೆ ತಿಳಿಸಿದೆ.
ಈ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ನಿರ್ಧಾರವನ್ನು ಕಳೆದ ವರ್ಷ ಏಪ್ರಿಲ್ ನಲ್ಲಿ ಪ್ರಕಟಿಸಲಾಗಿತ್ತು.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಗೃಹ ಸಚಿವ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ ಈ ಕೆಳಗಿನ 13 ಪ್ರಾದೇಶಿಕ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದೆ.
ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ನೇಮಕಾತಿ ಪರೀಕ್ಷೆಯು ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ನಡೆಸುವ ಪ್ರಮುಖ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಹುದ್ದೆಗಳಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಪರೀಕ್ಷೆಯನ್ನು 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಅನುಕೂಲವಾಗುವಂತೆ ಎಂಎಚ್ಎ ಮತ್ತು ಎಸ್ಎಸ್ಸಿ ಒಪ್ಪಂದಕ್ಕೆ ಸಹಿ ಹಾಕಿವೆ. ಅದರಂತೆ, ಎಸ್ಎಸ್ಸಿ ಪರೀಕ್ಷೆ ನಡೆಸಲು ಅಧಿಸೂಚನೆ ಹೊರಡಿಸಿದೆ.
ಲೋಕಸಭಾ ಚುನಾವಣೆ 2024 : ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಚಿವ ವಿ.ಸೋಮಣ್ಣ ಫುಲ್ ಆಕ್ಟಿವ್
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಾಗಿ ಘೋಷಿಸಿ : ಚಾಣಕ್ಯನಿಗೆ ಟಗರು ಸವಾಲ್