ತುಮಕೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮವಾಗಿ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೊರೋನಾ ನಿಯಂತ್ರಣ ಸಭೆ ನಡೆಸಲಾಗಿತ್ತು. ಈ ಬಳಿಕ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಕೂಡ ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೆ ಸೋಮವಾರ ಆರೋಗ್ಯ ಸಚಿವರು, ಕಂದಾಯ ಸಚಿವರ ನೇತೃತ್ವದಲ್ಲಿ ಮತ್ತೊಂದು ಕೋವಿಡ್ ಕಂಟ್ರೋಲ್ ಸಭೆ ನಡೆಯಲಿದೆ.
ಈ ಕುರಿತಂತೆ ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ವಿದೇಶಗಳಲ್ಲಿ ಕೊರೋನಾ ಹೆಚ್ಚಳದ ಕಾರಣದಿಂದ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸುವಂತೆ ಸೂಚಿಸಿದ್ದಾರೆ. ಹೀಗಾಗಿ ಸೋಮವಾರ ಕೊರೋನಾ ನಿಯಂತ್ರಣ ಸಭೆಯನ್ನು ನಡೆಸಲಾಗುವುದು ಎಂದರು.
ಸೋಮವಾರ ನಡೆಯಲಿರುವಂತ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕೈಗೊಳ್ಳಬಹುದಾದಂತ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದಿದ್ದಾರೆ. ಹೀಗಾಗಿ ಸೋಮವಾರ ನಡೆಯುತ್ತಿರುವಂತ ಕೋವಿಡ್ ನಿಯಂತ್ರಣ ಸಭೆಯು ತೀವ್ರ ಕುತೂಹಲ ಮೂಡಿಸಿದ್ದು, ಹೊಸ ವರ್ಷಾಚಾರಣೆಗೆ ಬ್ರೇಕ್ ಬೀಳಲಿದ್ಯಾ ಎನ್ನುವ ಬಗ್ಗೆ ಕಾದು ನೋಡಬೇಕಿದೆ.
Covid19: ನಿಮಗೆ ಗೊತ್ತಾ ಈಗ ಹೆಚ್ಚಿನ ಆತಂಕ ಸೃಷ್ಠಿಸಿರುವ ಬಿಎಫ್.7 ಒಮಿಕ್ರಾನ್ ಉಪತಳಿ 2 ವರ್ಷಗಳ ಹಿಂದೆಯೇ ಪತ್ತೆ.!
2023 Election: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ – ಸಿಎಂ ಬೊಮ್ಮಾಯಿ