ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದಂತ ರಾಜ್ಯ ಸಚಿವ ಸಂಪುಟ ಸಭೆ ನಿನ್ನೆ ಮುಂದೂಡಿಕೆಯಾಗಿತ್ತು. ಈ ಬೆನ್ನಲ್ಲೇ ಫೆಬ್ರವರಿ 20, 2025ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.
ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 20-02-2025ರ ಗುರುವಾರದಂದು ಮಧ್ಯಾಹ್ನ 3 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 4ನೇ ಸಭೆಯನ್ನು ಕರೆಯಲಾಗಿದೆ ಎಂದಿದ್ದಾರೆ.
ದಿನಾಂಕ 20-02-2025ರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
ಫೆಬ್ರವರಿ.20ರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆಯನ್ನು ಸಚಿವ ಸಂಪುಟ ಸಭೆ ನೀಡಲಿದೆ.
1984ರ ಸಿಖ್ ವಿರೋಧಿ ಗಲಭೆ ಪ್ರಕರಣ: ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ ಎಂದು ಕೋರ್ಟ್ ತೀರ್ಪು
BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ