ಬೆಂಗಳೂರು: ಅಕ್ಟೋಬರ್.25ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ, ಹಣಕಾಸು ಒದಗಿಸುವ ಕೆಲಸ ಮಾಡಲಾಗುತ್ತಿದೆ.
ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಮಾಹಿತಿ ನೀಡಿದ್ದು ದಿನಾಂಕ 25-10-2024ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 22ನೇ ಸಭೆಯನ್ನು ವಿಧಾನಸೌಧದದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ಪ್ರಣಾಣಿಕೆಯಲ್ಲಿ ಘೋಷಿಸಿದಂತೆ ಜಾರಿಗೊಳಿಸುವುದಾಗಿ ಈ ಹಿಂದೆ ತಿಳಿಸಿದ್ದರು. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಅ.25ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಪ್ರಕಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಶಾಸಕ ಮಂಜುನಾಥ್ ಭಂಡಾರಿ
ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್