ಪಶ್ಚಿಮ ಬಂಗಾಳ: ಇಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳಲ್ಲಿ ಶಾಲಾ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ. ತಿಟಗಢ ಶಾಲೆಯಲ್ಲಿ ತರಗತಿಗಳು ನಡೆಯುತ್ತಿದ್ದ ವೇಳೆ ಈ ಘಟನೆ ವರದಿಯಾಗಿದೆ.
BIGG NEWS : ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಆಗಮಿಸಲ್ಲ : ಎಸ್.ಟಿ.ಸೋಮಶೇಖರ್ ಸ್ಪಷ್ಟನೆ
ಮೂಲಗಳ ಪ್ರಕಾರ, ತಿಟಗಢ ಹೈಸ್ಕೂಲ್ನಲ್ಲಿ ತರಗತಿಗಳು ನಡೆಯುತ್ತಿದ್ದ ಸಮಯದಲ್ಲಿ 11 ಗಂಟೆ ಸುಮಾರಿಗೆ ರೂಫ್ಟಾಪ್ನಿಂದ ಸ್ಫೋಟದ ಶಬ್ದ ಕೇಳಸಿದೆ. ತಕ್ಷಣ ಸ್ಥಳಕ್ಕೆ ಶಿಕ್ಷಕರು ತೆರಳಿ ನೋಡಿದಾಗ ಶಾಲಾ ಕಟ್ಟಡದ ಮೇಲ್ಛಾವಣಿಯ ಅರ್ಧ ಭಾಗ ಹಾನಿಗೀಡಾಗಿರುವುದು ತಿಳಿದು ಬಂದಿದೆ.
ಪ್ರಾಥಮಿಕ ವಿಚಾರಣೆಯ ಪ್ರಕಾರ ಅಪರಿಚಿತ ವ್ಯಕ್ತಿಗಳು ಶಾಲೆಯ ಕಟ್ಟಡದ ಮೇಲೆ ಕಚ್ಚಾ ಬಾಂಬ್ ಎಸೆದಿದ್ದಾರೆ ಎನ್ನಲಾಗುತ್ತಿದ್ದು, ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎನ್ನಲಾಗುತ್ತಿದೆ.