ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮೇಲೆ ಕರ್ತವ್ಯದ ವೇಳೆಯಲ್ಲಿ ನಡೆಯುವ ಹಲ್ಲೆ, ದೌರ್ಜನ್ಯ, ನಿಂದನೆ ಮಾಡುವವರ ಮೇಲೆ ಕಠಿಣ ಕ್ರಮ ಜಾರಿಗೊಳಿಸುವಂತೆ ಸರ್ಕಾರವನ್ನು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಒತ್ತಾಯಿಸಿದ್ದಾರೆ.
ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ ಅವರ ನಿಯೋಗವು ಡಾ.ಶಾಲಿನಿ ರಜನೀಶ್, ಮುಖ್ಯಕಾರ್ಯದರ್ಶಿಗಳು ಕರ್ನಾಟಕ ಸರ್ಕಾರ, ಅವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರಿ ನೌಕರರ ಮೇಲೆ ಕರ್ತವ್ಯದ ವೇಳೆಯಲ್ಲಿ ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರಿಂದ ನಡೆಯುವ ಹಲ್ಲೆ, ದೌರ್ಜನ್ಯ, ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಿ ಕಿರುಕುಳ ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಲಾಯಿತ್ತು ಹಾಗೂ ಈ ಸಂಬಂಧ ಕಠಿಣ ಕಾನೂನುಗಳನ್ನು ಜಾರಿಗೆ ತರಲು ಪ್ರಸ್ತಾವನೆಯನ್ನು ಸಲ್ಲಿಸಿದೆ.
ನೌಕರರ ಸಂಘದ ಪ್ರಸ್ತಾವನೆಗೆ ಮುಖ್ಯ ಕಾರ್ಯದರ್ಶಿಗಳು ಈ ಹಿಂದೆ ವೈದ್ಯರ ಮೇಲೆ ಹಲ್ಲೆಯಾದಾಗ ರೂಪಿಸಲಾಗಿದ್ದ ಮಾದರಿಯಲ್ಲಿಯೇ ರಾಜ್ಯ ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದವರ ಮೇಲೆಯೂ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಪಾಲಿಸಿಯನ್ನು ರೂಪಿಸಿ ಕೂಡಲೇ ಕಡತ ಮಂಡಿಸುವಂತೆ ಕಾರ್ಯದರ್ಶಿಗಳು ಸಿ.ಆ.ಸು.ಇ ಅವರಿಗೆ ಸೂಚಿಸಿದ್ದಾರೆ.
BREAKING: ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮ ಉಲ್ಲಂಘನೆ: IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆಗೆ ಸಿಎಸ್ ನೋಟಿಸ್








