ಮೈಸೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ಸಿಟಿ ರವಿ ಕುಡಿದ ಮತ್ತಿನಲ್ಲಿ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ, ಬಿಜೆಪಿಯಲ್ಲಿ ದೇಶಕ್ಕಾಗಿ ಯಾರೂ ಪ್ರಾಣ ತ್ಯಾಗ ಮಾಡಿಲ್ಲ,ಸೋನಿಯಾ ಗಾಂಧಿ ಬಗ್ಗೆ ಕೆಟ್ಟದಾಗಿ ಮಾತನಾಡುವ ಮೂಲಕ ಸಿಟಿ ರವಿ ತಮ್ಮ ವ್ಯಾಘ್ರ ಮುಖ ತೋರಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಗರು ಗಾಂಧಿಯನ್ನು ಕೊಂದ ಗೂಡ್ಸೆ ಬಗ್ಗೆ ಮಾತನಾಡುತ್ತಾರೆ, ಇವರಿಗೆ ಸೋನಿಯಾ ಗಾಂಧಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಸಿಟಿ ರವಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
BIGG NEWS : ಹಲವು ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ
ಮಂಗಳೂರು ವಿವಿ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟ – ಸಚಿವ ಅಶ್ವತ್ಥನಾರಾಯಣ