ಬೆಂಗಳೂರು : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಅಕ್ರಮವಾಗಿ ನೆಲೆಸಿದವರಿಗೆ ಮನೆ ಹಂಚಿಕೆ ವಿಚಾರವಾಗಿ ಮನೆ ಹಂಚಿಕೆ ವಿರೋಧಿಸಿ ನಾಳೆ ವಿಪಕ್ಷ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ವೇಳೆ ನಾಳೆ ಪ್ರತಿಭಟನೆ ನಡೆಸಿದಂತೆ ಪೊಲೀಸರು ಬಿಜೆಪಿ ನಾಯಕರಿಗೆ ನೋಟಿಸ್ ನೀಡಿದ್ದಾರೆ. ಬೆಂಗಳೂರಿನ ಬಾಗಲೂರು ಠಾಣೆ ಪೋಲಿಸರು ನೋಟಿಸ್ ಜಾರಿ ಮಾಡಿದ್ದಾರೆ.
ಹೌದು ಕೋಗಿಲು ಲೇಔಟ್ ನಲ್ಲಿ ಅನಧಿಕೃತ ಮನೆಗಳನ್ನು ತೆರವುಗೊಳಿಸಿದ ಬಳಿಕ ಅಲ್ಲಿನ ನಿವಾಸಿಗಳಿಗೆ ಮನೆ ಹಂಚಿಕೆ ವಿಚಾರವನ್ನು ವಿರೋಧಿಸಿ ನಾಳೆ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು ಇದೇ ವಿಚಾರವಾಗಿ ಬಾಗಲೂರು ಠಾಣೆ ಪೋಲಿಸರು ಬಿಜೆಪಿಯ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್ ಗೆ ನೋಟಿಸ್ ನೀಡಿದ್ದಾರೆ.
ಜಿಬಿಎ ವ್ಯಾಪ್ತಿಯಿಂದ ಹೊರಗೆ ಪ್ರತಿಭಟನೆಗೆ ಬಿಜೆಪಿ ನಿರ್ಧರಿಸಿದ್ದು ಬಾಗಲೂರು ಮುಖ್ಯ ರಸ್ತೆಯ ಕಂಟ್ರಿ ಕ್ಲಬ್ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದರು. ನಿನ್ನೆ ರಾತ್ರಿ ಹರೀಶ್ ಮನೆಗೆ ಬಂದು ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಎಲ್ಲೂ ಪ್ರತಿಭಟನೆಗೆ ಅವಕಾಶ ಇಲ್ಲ ಹಾಗಾಗಿ ಸಾತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಧರಣಿ ನಡೆಸಿದಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.








