ಬೆಳಗಾವಿ : 2025ರಲ್ಲಿ 13,000 ಸೈಬರ್ ಕೇಸ್ ದಾಖಲಾಗಿದ್ದು, ಸದ್ಯಕ್ಕೆ 2025 ರಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ವಂಚನೆ ಪ್ರಕರಣ ತಡೆಯಲು ಸರ್ಕಾರ, ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ, ಬಿಜೆಪಿ ಸದಸ್ಯ ಸಿಮೆಂಟ್ ಮಂಜು ಅವರು ಕೇಳಿದ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿ, ಕಳೆದ ನಾಲ್ಕು ವರ್ಷಗಳಲ್ಲಿ ಕರ್ನಾಟಕದಲ್ಲಿ 52,000 ಸೈಬರ್ ವಂಚನೆ ಪ್ರಕರಣಗಳು ನಡೆದಿವೆ. ತಡೆಗಟ್ಟಲು ಕಾನೂನಿಗೆ ಬದಲಾವಣೆ ತರಲಾಗಿದೆ. ಆದರೆ, ಇಂಡಿಯಾ ಗೇಮಿಂಗ್ ಫೆಡರೇಶನ್ ಕಾನೂನಿಗೆ ತಡೆ ತಂದಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ವಿಚಾರಣೆಯ ಹಂತದಲ್ಲಿದೆ ಎಂದು ವಿವರಿಸಿದರು.
ಸೈಬರ್ ಅಪರಾಧ ಜಾಸ್ತಿಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಕರ್ನಾಟಕದಲ್ಲಿ 52,000 ಪ್ರಕರಣಗಳು ವರದಿಯಾಗಿವೆ. 2023ರಲ್ಲಿ 22,250 ಪ್ರಕರಣ ದಾಖಲಾಗಿದ್ದು, 6,159 ಪತ್ತೆ ಹಚ್ಚಲಾಗಿದೆ. ಸುಮಾರು 880 ಕೋಟಿ ರೂ. ವಂಚನೆ ಆಗಿದೆ. ಈ ಪೈಕಿ 177 ಕೋಟಿ ರೂ.ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.








