ನವದೆಹಲಿ : ಸೆಪ್ಟೆಂಬರ್ 21 ರ ಇಂದು ಉತ್ತರ ಅಂಡಮಾನ್ ಸಮುದ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೈಕ್ಲೋನಿಕ್ ಚಂಡಮಾರುತ ಪ್ರವೇಶಿಸುವ ಸಾಧ್ಯತೆ ಇದ್ದು, ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಸೆಪ್ಟೆಂಬರ್ 26 ರವರೆಗೆ ದೆಹಲಿ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೊಷಿಸಿದೆ. ಬೆಟ್ಟದ ರಾಜ್ಯ ಹಿಮಾಚಲದ ಕೆಲವು ಭಾಗಗಳಲ್ಲಿ ಬುಧವಾರ ಮಳೆಯಾಗಿದೆ. ಇಂದು ಕೂಡ ಹಲವೆಡೆ ಮಳೆಯಾಗುವ ಮುನ್ನೆಚ್ಚರಿಕೆ ಇದೆ. ಆದರೆ, ಭಾರೀ ಮಳೆಯಾಗುವ ಸಾಧ್ಯತೆ ಇಲ್ಲ. ಗುಡುಗು ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.
ಬಿಹಾರ, ಯುಪಿ, ಉತ್ತರಾಖಂಡ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಅಸ್ಸಾಂನಲ್ಲಿ ಸೆಪ್ಟೆಂಬರ್ 23 ರಿಂದ 26 ರವರೆಗೆ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.
Rainfall Warning : 21th to 26th September 2024
वर्षा की चेतावनी : 21th से 26th सितंबर 2024 #rainfallwarning #IMDWeatherUpdate #stayalert #StaySafe #Nagaland #Manipur #tripura #mizoram #Odisha #Assam #Meghalaya #arunachalppradesh #Chhattisgarh #MadhyaPradesh… pic.twitter.com/GjRBIrRHpi— India Meteorological Department (@Indiametdept) September 20, 2024