ಬೆಂಗಳೂರು: ಡಾನಾ ಚಂಡಮಾರುತದ ಹಿನ್ನಲೆಯಲ್ಲಿ ಅಕ್ಟೋಬರ್ 25 ರಂದು ಹೊರಡುವ ರೈಲು ಸಂಖ್ಯೆ 22883 ಪುರಿ-ಯಶವಂತಪುರ ಗರೀಬ್ ರಥ ಸಾಪ್ತಾಹಿಕ ಎಕ್ಸ್‌ಪ್ರೆಸ್, ಅಕ್ಟೋಬರ್ 26 ರಂದು ಹೊರಡುವ ರೈಲು ಸಂಖ್ಯೆ 22884 ಯಶವಂತಪುರ-ಪುರಿ ಗರೀಬ್ ರಥ ಸಾಪ್ತಾಹಿಕ ಎಕ್ಸ್‌ಪ್ರೆಸ್ ಮತ್ತು ಅಕ್ಟೋಬರ್ 27 ರಂದು ಹೊರಡುವ ರೈಲು ಸಂಖ್ಯೆ 12510 ಗುವಾಹಟಿ- ಎಸ್ಎಂವಿಟಿ ಬೆಂಗಳೂರು ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಪೂರ್ವ ಕರಾವಳಿ ಮತ್ತು ಈಶಾನ್ಯ ಗಡಿ ರೈಲ್ವೆ ವಲಯವು ರದ್ದು ಪಡಿಸಲಾಗಿದೆ ಎಂದು ಸೂಚಿಸಿದೆ.
ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿ ಹಬ್ಬದ ಪ್ರಯುಕ್ತ ಏಕಮುಖ ವಿಶೇಷ ರೈಲುಗಳ ಸಂಚಾರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 30, 2024 ರಂದು (ಬುಧವಾರ) ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಿಗ್ಗೆ 8:00 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 3:45 ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಈ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ.
ರೈಲು ಸಂಖ್ಯೆ 07324 ಯಶವಂತಪುರ – ಕಲಬುರಗಿ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 30, 2024 ರಂದು (ಬುಧವಾರ) ಯಶವಂತಪುರದಿಂದ ಸಂಜೆ 5:15 ಕ್ಕೆ ಹೊರಟು, ಮರುದಿನ ಅಂದರೆ ಅಕ್ಟೋಬರ್ 31, 2024 ರಂದು (ಗುರುವಾರ) ಬೆಳಗಿನ ಜಾವ 4:15 ಕ್ಕೆ ಕಲಬುರಗಿ ತಲುಪಲಿದೆ. ಮಾರ್ಗದಲ್ಲಿ ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ರೈಲು ಸಂಖ್ಯೆ 07325 ಕಲಬುರಗಿ – ಎಸ್‌ಎಸ್‌ಎಸ್ ಹುಬ್ಬಳ್ಳಿ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 31, 2024 ರಂದು (ಗುರುವಾರ) ಕಲಬುರಗಿಯಿಂದ ಬೆಳಿಗ್ಗೆ 6:15 ಕ್ಕೆ ಹೊರಟು ಅದೇ ದಿನ ಸಂಜೆ 4:00 ಗಂಟೆಗೆ ಹುಬ್ಬಳ್ಳಿ ತಲುಪಲಿದೆ. ಮಾರ್ಗದಲ್ಲಿ ಈ ರೈಲು ಶಹಾಬಾದ್, ಯಾದಗಿರಿ, ಕೃಷ್ಣಾ, ರಾಯಚೂರು, ಮಂತ್ರಾಲಯಂ ರೋಡ್, ಆದೋನಿ, ಬಳ್ಳಾರಿ, ತೋರಣಗಲ್ಲು, ಹೊಸಪೇಟೆ, ಕೊಪ್ಪಳ ಮತ್ತು ಗದಗ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಮೇಲೆ ತಿಳಿಸಿದ ಈ ವಿಶೇಷ ರೈಲುಗಳು (07323, 07324, ಮತ್ತು 07325) 1 ಎಸಿ ಫಸ್ಟ್ ಕ್ಲಾಸ್, 2 ಎಸಿ 2 ಟೈರ್, 4 ಎಸಿ 3 ಟೈರ್, 3 ಎಸಿ 3-ಟೈರ್ ಎಕಾನಮಿ, 6 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್, 1 ಪ್ಯಾಂಟ್ರಿ ಕಾರ್ ಮತ್ತು 2 ಲಗೇಜ್ ಬ್ರೇಕ್ ಮತ್ತು ಜನರೇಟರ್ ಕಾರುಗಳು ಸೇರಿದಂತೆ 21 ಬೋಗಿಗಳನ್ನು ಒಳಗೊಂಡಿರುತ್ತದೆ.
ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು.
ಶಿಗ್ಗಾವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಸಂಸದ ಬಸವರಾಜ ಬೊಮ್ಮಾಯಿ
ರಾಜ್ಯದ ‘ST ಸಮುದಾಯ’ದವರಿಗೆ ಗುಡ್ ನ್ಯೂಸ್: ‘ವಿವಿಧ ಯೋಜನೆ’ಗಳಿಗೆ ಅರ್ಜಿ ಆಹ್ವಾನ