ಬೆಂಗಳೂರು : ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಿದ್ದು , ರಾಜ್ಯದ 15 ಜಿಲ್ಲೆಗಳಿಗೆ ಹವಮಾನ ಇಲಾಖೆ ʻಯೆಲ್ಲೋ ಅಲರ್ಟ್ ಘೋಷಣೆ ʼ ಮಾಡಲಾಗಿದೆ.
ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ. ಡಿಸೆಂಬರ್ 13ರವರೆಗೂ ಮಳೆಯಾಗಲಿದ್ದು, ಈ ನಿಟ್ಟಿನಲ್ಲಿ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಕರ್ನಾಟಕದ ಮೇಲೆ ಅದರಲ್ಲೂ ಪ್ರಮುಖವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇಲೆ ‘ಮಾಂಡೌಸ್’ ಪ್ರಭಾವ ಹೆಚ್ಚಾಗಿರಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸೇರಿದಂ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸ್ವಲ್ಪ ಮಟ್ಟಿಗೆ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಚಂಡಮಾರುತದ ಪ್ರಭಾವದಿಂದಾಗಿ ಗಾಳಿಯೂ ಬೀಸಲಿದೆ. ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರದಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ. ಭಾನುವಾರ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಮಳೆಯಾಗಲಿದೆ. ಡಿಸೆಂಬರ್ 12ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ.
ಒಟ್ಟಾರೆಯಾಗಿ ಮುಂದಿನ 3 ದಿನಗಳ ಪೈಕಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಸಹಿತ ಧಾರಾಕಾರವಾಗಿ ಮಳೆಯಾಗುವ ಎಲ್ಲಾ ಸಾಧ್ಯತೆಗಳಿದೆ ಎಂದು ಎಚ್ಚರಿಕೆಯನ್ನು ಹವಮಾನ ಇಲಾಖೆ ಈಗಾಗಲೇ ನೀಡಲಾಗಿದೆ.