ಕೋಲಾರ: ಜಿಲ್ಲೆಯಲ್ಲಿ ನಾಳೆ ಫೆಂಗಲ್ ಚಂಡಮಾರುತದ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ.
ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಆದೇಶಿಸಿದ್ದು ನಾಳೆ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.
ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ.
BREAKING: ನಾಳೆ ಬೆಂಗಳೂರಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯಿಲ್ಲ- DC ಜಗದೀಶ್ ಸ್ಪಷ್ಟನೆ | School Holiday
Watch Video: ಫೆಂಗಲ್ ಚಂಡಮಾರುತ ಎಫೆಕ್ಟ್: ಲ್ಯಾಂಡ್ ಆಗಲು ಪರದಾಡಿ ಮತ್ತೆ ಹಾರಿದ ವಿಮಾನ, ವಿಡಿಯೋ ವೈರಲ್