ದಕ್ಷಿಣ ಕನ್ನಡ/ಮೈಸೂರು: ರಾಜ್ಯಾಧ್ಯಂತ ಬಂಗಾಲಕೊಳ್ಳಿಯಲ್ಲಿ ಎದ್ದಿರುವಂತ ಫೆಂಗಲ್ ಚಂಡಮಾರುತದ ಕಾರಣ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಚಳಿಗಾಳಿ ಸಹಿತ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಫೆಂಗಲ್ ಚಂಡಮಾರುತದ ಕಾರಣ ನಾಳೆ ರಾಜ್ಯದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ನಾಳೆ ಮೈಸೂರು ಜಿಲ್ಲೆಯ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ನಾಳೆ ಮೈಸೂರು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ಮಾತ್ರ ರಜೆ
ಫೆಂಗಲ್ ಚಂಡಮಾರುತದ ಕಾರಣ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಕೇವಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಾತ್ರವೇ ನಾಳೆ ರಜೆ ನೀಡಲಾಗಿದೆ. ಇನ್ನುಳಿದಂತೆ ಕಾಲೇಜುಗಳು ಎಂದಿನಂತೆ ನಡೆಯಲಿವೆ ಅಂತ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ
ನಿನ್ನೆ ಫೆಂಗಲ್ ಚಂಡಮಾರುತದ ಕಾರಣ ಶಾಲಾ-ಕಾಲೇಜುಗಳಿಗೆ ಕೋಲಾರ ಜಿಲ್ಲೆಯಲ್ಲಿ ರಜೆ ಘೋಷಿಸಿ ಡಿಸಿ ಅಕ್ರಂ ಪಾಷಾ ಆದೇಶಿಸಿದ್ದರು. ನಾಳೆ ಕೂಡ ಚಂಡಮಾರುತದ ಕಾರಣ ಮಳೆ, ಚಳಿಗಾಳಿ ಬೀಸುವ ಮುನ್ಸೂಚನೆಯನ್ನು ಆರೋಗ್ಯ ಇಲಾಖೆ ನೀಡಿರುವ ಕಾರಣ, ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ಈ ಸಂಬಂಧ ಡಿಸಿ ವೆಂಕಟರಾಜಾ ಅವರು ಆದೇಶಿಸಿದ್ದು, ಫೆಂಗಲ್ ಚಂಡಮಾರುತದ ಕಾರಣ ನಾಳೆ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ
ನಾಳೆ ಮಂಡ್ಯ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆಯನ್ನು ಘೋಷಿಸಲಾಗಿದೆ. ಈ ಕುರಿತಂತೆ ಡಿಸಿ ಡಾ.ಕುಮಾರ್ ಆದೇಶಿಸಿದ್ದು, ನಾಳೆ ಫೆಂಗಲ್ ಚಂಡಮಾರುತದ ಕಾರಣ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಅಂತ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ನಾಳೆ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರ್ ಆದೇಶಿಸಿದ್ದಾರೆ. ಹವಾಮಾನ ಇಲಾಖೆಯು ನಾಳೆ ಆರೆಂಜ್ ಅಲರ್ಟ್ ನೀಡಿದೆ. ಈ ಮುನ್ಸೂಚನೆಯಿಂದ ಭಾರೀ ಮಳೆಯಾಗುವ ಕಾರಣ ನಾಳೆ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಈ ಕುರಿತಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದು, ನಾಳೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಅನ್ನು ಹವಾಮಾನು ಇಲಾಖೆ ಘೋಷಿಸಿದೆ. ಶಾಲಾ ವಿದ್ಯಾರ್ಥಿಗಳ ಆರೋಗ್ಯದ ಕಾರಣ, ಫೆಂಗಲ್ ಚಂಡಮಾರುತದ ಕುಳಿರ್ ಗಾಳಿಯ ಕಾರಣ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಅಂತ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ, ಪದವಿ ಕಾಲೇಜುಗಳಿಗೆ ಇಲ್ಲ
ನಾಳೆ ಚಾಮರಾಜನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಆದರೇ ಪದವಿ ತರಗತಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ರಜೆಯನ್ನು ನೀಡಲಾಗಿಲ್ಲ.
ವರದಿ: ವಸಂತ ಬಿ ಈಶ್ವರಗೆರೆ
ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಶೀಘ್ರ ‘ಇ-ಖಾತಾ’ ವಿತರಣೆಗೆ ಹೆಚ್ಚುವರಿ ಅಧಿಕಾರಿಗಳ ನಿಯೋಜನೆ