Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SIT ತನಿಖೆಯಿಂದ ಸಿ ಜೆ ರಾಯ್ ಆತ್ಮಹತ್ಯೆಗೆ ಕಾರಣ ತಿಳಿಯ ಬೇಕಿದೆ: ಸಚಿವ ದಿನೇಶ್ ಗುಂಡೂರಾವ್

01/02/2026 7:50 PM

‘ಕೇಂದ್ರ ಬಜೆಟ್‌ʼನಲ್ಲಿ ಬೃಹತ್‌ ಕೈಗಾರಿಕೆ ಕ್ಷೇತ್ರಕ್ಕೆ ಭಾರೀ ಒತ್ತು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

01/02/2026 7:45 PM

ಕರ್ನಾಟಕದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

01/02/2026 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆಂಗಲ್ ಚಂಡಮಾರುತ ಹಿನ್ನಲೆ: ಬೆಂಗಳೂರಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ
KARNATAKA

ಫೆಂಗಲ್ ಚಂಡಮಾರುತ ಹಿನ್ನಲೆ: ಬೆಂಗಳೂರಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ

By kannadanewsnow0930/11/2024 4:26 PM

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಫೆಂಗಲ್ ಚಂಡಮಾರುತ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಇಂದು ವರ್ಚ್ಯುವಲ್ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ 3/4 ದಿನಗಳ ಕಾಲ ಮಳೆ ಬರುವ ಮುನ್ಸೂಚನೆಯಿದ್ದು, ಗಾಳಿ ಕೂಡಾ ಹೆಚ್ಚಾಗಿ ಬರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಮರ ಕಟಾವು ಮಾಡುವ ಎಲ್ಲಾ 28 ತಂಡಗಳನ್ನು ಸನ್ನದ್ಧರಾಗಿರಬೇಕು. ಮರಗಳು, ಮರದ ರೆಂಬೆ-ಕೊಂಬೆಗಳು ಬಿದ್ದ ದೂರುಗಳು ಬಂದ ಕೂಡಲೆ ಸ್ಥಳಕ್ಕೆ ತೆರಳಿ ತೆರವುಗೊಳಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.

ಆಯಾ ವಲಯ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ನೀರು ನಿಲ್ಲುವ ಸ್ಥಳದಲ್ಲಿ ಯಂತ್ರೋಪಕರಣಗಳು, ಪಂಪ್‌ಗಳನ್ನು ಸಿದ್ದವಾಗಿಟ್ಟುಕೊಂಡಿರಬೇಕು. ಈ ಹಿಂದೆ ಮಳೆಯಿಂದ ಜಲಾವೃತಗೊಂಡ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮರಳು ಚೀಲಗಳನ್ನು ಇಟ್ಟಿಕೊಂಡು, ಮಳೆಯಿಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಪರಿಹಾರ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕೆಂದು ಸೂಚಿಸಿದರು.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು:

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರಜಾ ದಿನವೂ ಎಲ್ಲಾ ವಲಯ ಅಧಿಕಾರಿಗಳು/ಅಭಿಯಂತರರುಗಳು ತಮ್ಮ ವಲಯ ವ್ಯಾಪ್ತಿಯಲ್ಲಿ ಹಾಜರಿದ್ದು, ಮಳೆಯಾಗುವ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯದ ಹಿರಿಯ ಅಧಿಕಾರಿಗಳು ಈ ಕುರಿತು ಮೇಲ್ವಿಚಾರಣೆ ಮಾಡಲು ಸೂಚಿಸಿದರು.

ಜೆಸಿಬಿಗಳ ಮೂಲಕ ಸ್ವಚ್ಛತೆ:

ಬೃಹತ್ ನೀರುಗಾಲುವೆ(ರಾಜಕಾಲುವೆ)ಗಳಲ್ಲಿ ಜೆಸಿಬಿಗಳ ಮೂಲಕ ಹೂಳೆತ್ತಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಎಲ್ಲಾ ಕಡೆ ಜೆಸಿಬಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳಿಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಲು ಸೂಚಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಡಾ. ಕೆ. ಹರೀಶ್ ಕುಮಾರ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ಗಿರೀಶ್, ಕರೀಗೌಡ, ರಮೇಶ್, ರಮ್ಯಾ, ಸ್ನೇಹಲ್, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಡ್ರಗ್ಸ್ ವಿರುದ್ಧ ಕ್ರಮಕೈಗೊಳ್ಳಲು ನಿರ್ಲಕ್ಷಿಸಿದರೆ ಅಧಿಕಾರಿಗಳ ತಲೆದಂಡ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ

BREAKING: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೇ ಕೇಸ್: ನ್ಯಾಯಾಲಯಕ್ಕೆ ಎಸ್ಐಟಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

Share. Facebook Twitter LinkedIn WhatsApp Email

Related Posts

SIT ತನಿಖೆಯಿಂದ ಸಿ ಜೆ ರಾಯ್ ಆತ್ಮಹತ್ಯೆಗೆ ಕಾರಣ ತಿಳಿಯ ಬೇಕಿದೆ: ಸಚಿವ ದಿನೇಶ್ ಗುಂಡೂರಾವ್

01/02/2026 7:50 PM1 Min Read

ಕರ್ನಾಟಕದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

01/02/2026 7:35 PM2 Mins Read

ಕನ್ನಡದ ಖ್ಯಾತ ಕಲಾವಿದ ದೇವನಾಗೇಶ್ ನಿಧನ: ಚಿತ್ರರಂಗ, ರಂಗಸಿರಿ ಬಳಗ ಸಂತಾಪ

01/02/2026 5:36 PM1 Min Read
Recent News

SIT ತನಿಖೆಯಿಂದ ಸಿ ಜೆ ರಾಯ್ ಆತ್ಮಹತ್ಯೆಗೆ ಕಾರಣ ತಿಳಿಯ ಬೇಕಿದೆ: ಸಚಿವ ದಿನೇಶ್ ಗುಂಡೂರಾವ್

01/02/2026 7:50 PM

‘ಕೇಂದ್ರ ಬಜೆಟ್‌ʼನಲ್ಲಿ ಬೃಹತ್‌ ಕೈಗಾರಿಕೆ ಕ್ಷೇತ್ರಕ್ಕೆ ಭಾರೀ ಒತ್ತು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

01/02/2026 7:45 PM

ಕರ್ನಾಟಕದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

01/02/2026 7:35 PM

ಯುರೋಪಿಯನ್ ಸೈನ್ಯಗಳನ್ನು ‘ಭಯೋತ್ಪಾದಕ ಗುಂಪುಗಳೆಂದು ಇರಾನ್ ಘೋಷಣೆ

01/02/2026 6:25 PM
State News
KARNATAKA

SIT ತನಿಖೆಯಿಂದ ಸಿ ಜೆ ರಾಯ್ ಆತ್ಮಹತ್ಯೆಗೆ ಕಾರಣ ತಿಳಿಯ ಬೇಕಿದೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0901/02/2026 7:50 PM KARNATAKA 1 Min Read

ಶಿವಮೊಗ್ಗ: ಸಿಜೆ ರಾಯ್ ಆತ್ಮಹತ್ಯೆ ಕೇಸ್ ಎಸ್ ಐಟಿ ತನಿಖೆಯಿಂದ ಬಯಲು ಆಗಬೇಕಿದೆ. ಆತ್ಮಹತ್ಯೆಯ ನಿಜಾಂಶಗಳು ಗೊತ್ತಾಗಬೇಕಿದೆ ಎಂದು ಆರೋಗ್ಯ…

ಕರ್ನಾಟಕದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

01/02/2026 7:35 PM

ಕನ್ನಡದ ಖ್ಯಾತ ಕಲಾವಿದ ದೇವನಾಗೇಶ್ ನಿಧನ: ಚಿತ್ರರಂಗ, ರಂಗಸಿರಿ ಬಳಗ ಸಂತಾಪ

01/02/2026 5:36 PM

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ನಾಳೆ ‘ಸಾಗರ ನಗರ ಸಾರಿಗೆ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ

01/02/2026 5:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.