ನವದೆಹಲಿ: ಸಿತ್ರಾಂಗ್(Sitrang) ಚಂಡಮಾರುತದ ಪ್ರಭಾವ ಸೋಮವಾರ ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ನಿನ್ನೆ ಮತ್ತು ಇಂದು ಈ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದೂ ಕೂಡ ಈ ನಾಲ್ಕು ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ.
ಅಕ್ಟೋಬರ್ 24 ಮತ್ತು 25 ರಂದು ಈಶಾನ್ಯ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ‘ಸಿತ್ರಾಂಗ್’ ಚಂಡಮಾರುತದ ಪ್ರಭಾವದಿಂದಾಗುವ ವಿನಾಶವನ್ನು ಎದುರಿಸಲು ಜನರನ್ನು ಸ್ಥಳಾಂತರಿಸುವುದು ಮತ್ತು ಆಶ್ರಯ ತಾಣಗಳಿಗೆ ಪರಿಹಾರ ಸಾಮಗ್ರಿಗಳನ್ನು ಪೂರೈಸುವುದು ಸೇರಿದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಿತ್ರಾಂಗ್ ಚಂಡಮಾರುತದಿಂದಾಗಿ ಮಂಗಳವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುವುದರಿಂದ ಎಚ್ಚರವಾಗಿರುವಂತೆ ಜನರಿಗೆ ಮನವಿ ಮಾಡಿದ್ದಾರೆ.
ಅಟ್ಟಾರಿ-ವಾಘಾ ಗಡಿಯಲ್ಲಿ ದೀಪಾವಳಿಯಂದು ಸಿಹಿ ವಿನಿಮಯ ಮಾಡಿಕೊಂಡ ಭಾರತ-ಪಾಕಿಸ್ತಾನ ಸೈನಿಕರು