ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.