ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳು ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಆದಿಶಕ್ತಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ನಲ್ಲಿ ಗ್ಯಾಸ್ ಲೀಕ್ ಆದ ಪರಿಣಾಮ ಸ್ಪೋಟಗೊಂಡು ಮನೆ ಮಾಲೀಕ ವೆಂಕಟೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರ ಜೊತೆಗೆ ಕಿರಣ್ ಎಂಬುವರಿಗೂ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ.
ವೆಂಕಟೇಶ್ ಸ್ಥಿತಿ ಗಂಭೀರವಾಗಿದೆ. ಅವರಿಗೆ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ಇನ್ನು ಕಿರಣ್ ಹಾಗೂ ಧರಣೇಶ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂದಹಾಗೇ ವೆಂಕಟೇಶ್ ಅವರ ಮನೆಗೆ ನಿನ್ನೆಯಷ್ಟೇ ಇಂಡಿಯನ್ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡಲಾಗಿತ್ತು. ಗ್ಯಾಸ್ ಸಿಲಿಂಡರ್ ನಲ್ಲಿ ಲೀಕೇಜ್ ಇದ್ದದ್ದೇ ಸ್ಪೋಟಕ್ಕೆ ಕಾರಣ ಎಂಬುದಾಗಿ ಹೇಳಲಾಗುತ್ತಿದೆ. ಸ್ಥಳಕ್ಕೆ ಸಾಗರ ಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಕೋರಿ ಪತ್ನಿ ಸಪ್ನಾ ಅರ್ಜಿ
ರೈತರ ಗಮನಕ್ಕೆ: ಹಸು, ಕುರಿ, ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ