ಬೆಳಗಾವಿ:ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ನಡೆಸಿದೆ.
ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮತ್ತೆ ಹತ್ತು ದಿನಗಳವರೆಗೆ ಸಿಎಂ ಬೊಮ್ಮಾಯಿ ಗಡುವು ಕೇಳಿದ್ದಾರೆ. ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ನಿರ್ಧಾರ ಮಾಡುತ್ತೇನೆ. ಸಿಎಂ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದ ಪಂಚಮಸಾಲಿ ಸಮಾಜದ ನಾಯಕರು. ವೇದಿಕೆಯಲ್ಲೇ ಸಮಾಜದ ನಿರ್ಧಾರ ಹೇಳ್ತೇನೆ ಅಂತ ಮುಖಂಡರು ಹೊರಟಿದ್ದಾರೆ.
ಈ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ಡಿ. 29ಕ್ಕೆ 2ಎ ಮೀಸಲಾತಿ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸುವರ್ಣಸೌಧದ ಬಳಿಯ ರಾಘವೇಂದ್ರ ಲೇಔಟ್ನಲ್ಲಿ ಸಮಾವೇಶ ನಡೆಯುತ್ತಿದೆ. ಡಿ.28ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದರು.
BIGG NEWS: ಪಂಚರತ್ನ ರಥಯಾತ್ರೆಯಲ್ಲಿ ಜನತೆಯ ಅಲೆ ನೋಡಿ ಕೊರೊನಾ ಹೇಳುತ್ತಿದ್ದಾರೆ; ಹೆಚ್.ಡಿ ಕುಮಾರಸ್ವಾಮಿ