ಮಂಡ್ಯ : ಉಳುವವನೇ ಭೂ ಒಡೆಯ ಎಂಬ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿ 21 ಲಕ್ಷ ಎಕರೆ ಭೂಮಿಯನ್ನು ನಿರ್ಗತಿಕರಿಗೆ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಿದವರು ಡಿ.ದೇವರಾಜ ಅರಸು ಅವರು ಎಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಬುಧವಾರ ಹೇಳಿದರು.
ಮದ್ದೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110 ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಳುವವನೇ ಭೂ ಒಡೆಯ ಎಂಬ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿ 21 ಲಕ್ಷ ಎಕರೆ ಭೂಮಿಯನ್ನು ನಿರ್ಗತಿಕರಿಗೆ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಿದರು. ಈ ಕಾಯ್ದೆ ಲಕ್ಷಾಂತರ ಜನರಿಗೆ ಭೂ ಒಡೆತನದ ಹಕ್ಕನ್ನು ನೀಡಿತು.
ಅರಸು ಅವರು
ಸರ್ವ ಜನಾಂಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾನೂನುಗಳನ್ನು ಜಾರಿಗೊಳಿಸಿದ ಪರಿಣಾಮ ಅವರನ್ನು ಸದಾ ನೆನೆಯುವಂತಾಗಿದೆ ಎಂದರು.
ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದು ಕೊಟ್ಟು. ಜೀತ ಪದ್ಧತಿ, ಮಲ ಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸುತ್ತ ಬಡವರು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಇದ್ದರು ಎಂದು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ತಿಳಿಸಿದರು.
ಭಾರತೀ ಕಾಲೇಜು ನಿವೃತ್ತ ಪ್ರಾಧ್ಯಾಪಕ ಬಿ.ಎಸ್. ಬೋರೆಗೌಡ ಅವರು ಕಾರ್ಯಕ್ರಮ ಕುರಿತು ಪ್ರಧಾನ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ಸುನೀತಾ, ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜ್, ಸಮಾಜ ಕಲ್ಯಾಣಾಧಿಕಾರಿ ನಾಗರಾಜ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತಮ್ಮೇಗೌಡ ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಚನ್ನಸಂದ್ರ ಲಕ್ಷ್ಮಣ್, ದಲಿತ ಮುಖಂಡ ನಿಂಗಯ್ಯ, ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ
ಬೆಂಗಳೂರಿನ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತ