ಬೆಂಗಳೂರು : ಕೆ.ಜೆ. ಹಳ್ಳಿ-ಡಿ.ಜೆ. ಹಳ್ಳಿ ಬಂಧಿತರ ಬಿಡುಗಡೆ ವಿಚಾರಕ್ಕೆ ಸಂಬಂಧಸಿದಂತೆ ಜೈಲು ಸೇರಿದವರನ್ನು ಬಿಡುಗಡೆ ಮಾಡಿಸುವಂತೆ ಸುಮಾರು 15 ಕುಟುಂಬಸ್ಥರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಶಿವಾಜಿನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕಾರಕ್ಕೆ ಆಗಮಿಸಿದ್ದ ಡಿ.ಕೆ. ಶಿವಕುಮಾರ್‌ಅವರಿಗೆ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಕುಟುಂಬದ ಸದಸ್ಯರು ಮನವಿ ಸಲ್ಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ನಾವು ಏನೇ ಮಾಡಿದರು ಮಾಡಿದರೂ ಕಾನೂನು ವ್ಯಾಪ್ತಿಯಲ್ಲಿ ಮಾಡಬೇಕು. ಈ ಬಗ್ಗೆ ಹೆಚ್ಚು ಮಾತನಾಡಲು ಆಗುವುದಿಲ್ಲ. ಬಿಜೆಪಿ ಸರ್ಕಾರ ಕೆಲವು ಸೆಕ್ಷನ್‌ಗಳನ್ನು ಪ್ರಯೋಗ ಮಾಡಿರುವುದರಿಂದ ಬಂಧಿತರು ಬಿಡುಗಡೆ ಆಗುತ್ತಿಲ್ಲ. ಕಾನೂನಿನ ಅಡಿಯಲ್ಲಿ ನ್ಯಾಯ ಒದಗಿಸಿ ಕೊಡಬೇಕು. ಈ ಬಗ್ಗೆ ಶಾಸಕರ ಬಳಿ ಚರ್ಚೆ ಮಾಡಿದ್ದು, ಕಾನೂನು ತಂಡದ ಜತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದರು.
ಈ ಪ್ರಕರಣದ ಕುರಿತು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ತಿಳಿಸಿದರು.ಕಾನೂನು ಕೈಗೆತ್ತಿಕೊಂಡವರ ವಿರುದ್ಧದ ಕ್ರಮಕ್ಕೆ ಅಭ್ಯಂತರವಿಲ್ಲ. ಆದರೆ, ಕೆಲವು ಅಮಾಯಕರು ಇದರಲ್ಲಿ ಸಿಲುಕಿದ್ದಾರೆ ಎಂಬ ಕೂಗು ಇದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡುತ್ತೇನೆ ಎಂದರು.