ಬೆಂಗಳೂರು : ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಸಂದರ್ಭದಲ್ಲಿ ರಾಜ್ಯಕ್ಕೆ ಮರಳಿದ್ದ ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿನಲ್ಲಿ ಶಿಕ್ಷಣ ಮುಂದುವರಿಸಲು ಸರ್ಕಾರ ನೆರವಾಗದೇ ಇರುವುದು ದುಃಖಕರ ವಿಚಾರ. ಅತಂತ್ರಗೊಂಡಿರುವ ರಾಜ್ಯದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಯುದ್ಧ ಸಂತ್ರಸ್ತ ವಿದ್ಯಾರ್ಥಿಗಳು ರಾಜ್ಯದಲ್ಲೇ ಶಿಕ್ಷಣ ಮುಂದುವರಿಸಲು ಪರಿಹಾರವೇನು? ನನ್ನಿಂದ ಹಾಗೂ ಪಕ್ಷದಿಂದ ಏನೇ ಸಹಾಯ ಕೇಳಿದರೂ ಮಾಡಲು ಖಂಡಿತ ಸಿದ್ಧ. ವಿದ್ಯಾರ್ಥಿಗಳು ಈಕೂಡಲೇ ನನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ನೇರ ಸಂದೇಶ (DM) ಕಳಿಸುವ ಮೂಲಕ ಸಂಪರ್ಕಿಸಬಹುದು. ವಿದ್ಯಾರ್ಥಿಗಳ ಬೆನ್ನಿಗೆ ಖಂಡಿತ ನಾವು ನಿಲ್ಲುತ್ತೇವೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಸಂದರ್ಭದಲ್ಲಿ ರಾಜ್ಯಕ್ಕೆ ಮರಳಿದ್ದ ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿನಲ್ಲಿ ಶಿಕ್ಷಣ ಮುಂದುವರಿಸಲು ಸರ್ಕಾರ ನೆರವಾಗದೇ ಇರುವುದು ದುಃಖಕರ ವಿಚಾರ. ಅತಂತ್ರಗೊಂಡಿರುವ ರಾಜ್ಯದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.
1/2 pic.twitter.com/gcHQUIaBGT— DK Shivakumar (@DKShivakumar) December 27, 2022
ಯುದ್ಧ ಸಂತ್ರಸ್ತ ವಿದ್ಯಾರ್ಥಿಗಳು ರಾಜ್ಯದಲ್ಲೇ ಶಿಕ್ಷಣ ಮುಂದುವರಿಸಲು ಪರಿಹಾರವೇನು? ನನ್ನಿಂದ ಹಾಗೂ ಪಕ್ಷದಿಂದ ಏನೇ ಸಹಾಯ ಕೇಳಿದರೂ ಮಾಡಲು ಖಂಡಿತ ಸಿದ್ಧ. ವಿದ್ಯಾರ್ಥಿಗಳು ಈಕೂಡಲೇ ನನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ನೇರ ಸಂದೇಶ (DM) ಕಳಿಸುವ ಮೂಲಕ ಸಂಪರ್ಕಿಸಬಹುದು. ವಿದ್ಯಾರ್ಥಿಗಳ ಬೆನ್ನಿಗೆ ಖಂಡಿತ ನಾವು ನಿಲ್ಲುತ್ತೇವೆ.
2/2— DK Shivakumar (@DKShivakumar) December 27, 2022