ದಕ್ಷಿಣಕನ್ನಡ : ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ ನಾಳೆ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದು, ಧರ್ಮಸ್ಥಳದಲ್ಲಿ ನಾಳೆ ಬೃಹತ್ ಧರ್ಮ ಜಾಗೃತಿ ಸಮಾವೇಶ ಆಯೋಜನೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಧರ್ಮ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ಒಂದು ಸಮಾವೇಶದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆಯ ದೇವಸ್ಥಾನ, ದೈವಸ್ಥಾನ, ಬಸದಿಗಳ ಪ್ರಮುಖರು ವಿವಿಧ ಸಂಘಟನೆ ಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಧರ್ಮಸ್ಥಳ ಸಮಿತಿಯಿಂದ ಜಾಗೃತಿ ಸಮಾವೇಶ ಯೋಜನೆ ಮಾಡಲಾಗಿದೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾವವನದಲ್ಲಿ ಈ ಸಮಾವೇಶ ನಡೆಯಲಿದೆ.