ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಇದೀಗ ಜಿಲ್ಲೆಯಾದ್ಯಂತ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ ಕೂಡ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಹೌದು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಆ ಭಾಗಗಳಲ್ಲಿ ಇತ್ತೀಚಿಗೆ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಭಾರಿ ಅವಾಂತರ ಸೃಷ್ಟಿಯಾಗುತ್ತಿವೆ. ಹಾಗಾಗಿ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಗೂ ಕೂಡ ರಜೆ ಘೋಷಸಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಅಲ್ಲದೆ ಮೀನುಗಾರರು ಸಮುದ್ರ ಕೇಳಿಯಾದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ ಸಮುದ್ರ ತೀರದ ಜನರು ಎಚ್ಚರವಹಿಸುವಂತೆ ಸಲಹೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಸುರಕ್ಷತೆಗಾಗಿ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ.

Share.
Exit mobile version