ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲೂಕಿನ ಪೊಲೀಸ್ ಠಾಣೆಯಲ್ಲಿ, ವಿಚಾರಣೆಯ ವೇಳೆ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೂಡುಬಿದರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ ವಿರುದ್ಧ ಈ ಒಂದು ಗಂಭೀರ ಆರೋಪ ಕೇಳಿ ಬಂದಿದ್ದು, ಕಳೆದ ಮೇನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಪ್ರಾಪ್ತ 16 ವರ್ಷದ ಬಾಲಕ 18 ವರ್ಷದ ಯುವಕ ಹಾಗೂ ಮಹಿಳೆಯ ಮೇಲೆ ಇನ್ಸ್ಪೆಕ್ಟರ್ ಸಂದೇಶ್ ಹಲ್ಲೆ ಮಾಡಿದ್ದಾರೆ. 2025 9ರ ರಾತ್ರಿ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದ್ದು, ಈ ಕುರಿತು ಮಾನವ ಹಕ್ಕುಗಳ ಆಯೋಗ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಲಾಗಿದೆ. ಬಾಲಕ ಹಾಗೂ ಮಹಿಳೆಯ ಮೇಲೆ ಇನ್ಸ್ಪೆಕ್ಟರ್ ದರ್ಪ, ದೌರ್ಜನ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ಸ್ಪೆಕ್ಟರ್ ಹಲ್ಲೆ ಮಾಡಿರುವ ಕುರಿತು ಸಮಿತಿ ನಾಯಕ್ ರಾಜ್ಯ ಮಾನವ ಹಕ್ಕುಗಳು ಆಯೋಗ ಹಾಗೂ ಕಾನೂನು ಪ್ರಾಧಿಕಾರಕ್ಕೆ ಈ ಕುರಿತು ದೂರು ಸಲ್ಲಿಸಿದ್ದಾರೆ.








