ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಸವಿತಾ ಸಮಾಜದ ಮುಖಂಡರಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಅವರು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಇಂತಹ ಕಿಶೋರ್ ಕುಮಾರ್ ಅವರಿಗೆ ವಿಧಾನ ಪರಿಷತ್ ಉಪ ಚುನಾವಣೆಗೆ ಟಿಕೆಟ್ ನೀಡಲಾಗಿದೆ.
ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಒಂದು ಸ್ಥಾನಕ್ಕೆ ಈಗ ಉಪ ಚುನಾವಣೆ ಘೋಷಣೆಯಾಗಿತ್ತು.
ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ.
ಇನ್ನೂ ಅಕ್ಟೋಬರ್.21ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಬಳಿಕ ಅಕ್ಟೋಬರ್.24ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.
BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!