ದಕ್ಷಿಣಕನ್ನಡ : ಕಾರಿನಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಮರ್ಧಾಳದಲ್ಲಿ ನಡೆದಿದೆ.ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ವಿಠಲ ರೈ ಅವರು ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದಿದೆ. ಕಾರನ್ನು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದಾನೆ. ವಿಠಲ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಿಜೆಪಿ ಬಂಡಾಯ ನಾಯಕ ‘ಕೆ.ಎಸ್ ಈಶ್ವರಪ್ಪ’ ವಿರುದ್ಧ ‘ನೀತಿ ಸಂಹಿತೆ ಉಲ್ಲಂಘನೆ’ ಪ್ರಕರಣ ದಾಖಲು
ವಿಷಯ ತಿಳಿಯುತ್ತಿದ್ದಂತೆ ಕಡಬ ಸರಕಾರಿ ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ದಕ್ಷಿಣ ಕನ್ನಡ ಎಸ್ಪಿ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು. ಮಧ್ಯರಾತ್ರಿ ಎರಡು ಗಂಟೆಯವರೆಗೂ ರಾಜ್ಯ ಹೆದ್ದಾರಿ ರಸ್ತೆ ತಡೆ ನಡೆಸಿದರು. ಪ್ರತಿಭಟನೆಯಲ್ಲಿ ನೂರಾರು ಜನರು ಸೇರಿದ್ದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿ ರಸ್ತೆ ತಡೆ ನಡೆಸಿದ್ದರು.
BREAKING : ಬೆಂಗಳೂರಲ್ಲಿ ಕ್ರಷರ್ ಮಾಲೀಕನ ಮನೆ ಮೇಲೆ ‘IT’ ದಾಳಿ : 1.20ಕೋಟಿ ನಗದು 800ಗ್ರಾಂ ಚಿನ್ನಾಭರಣ ವಶ
ದಕ್ಷಿಣ ಕನ್ನಡ ಎಸ್ಪಿ ಸ್ಥಳಕ್ಕೆ ಬರುವಂತೆ ಪ್ರತಿಭಟನಾನಿರತರು ಪಟ್ಟು ಹಿಡಿದಿದ್ದರು. ರಾತ್ರಿ ಎರಡು ಗಂಟೆಯ ಸುಮಾರಿಗೆ ಎಸ್ಪಿ ಸಿ.ಬಿ.ರಿಷ್ಯಂತ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರ ಮನವೊಲಿಸುವ ಪ್ರಯತ್ನ ಮಾಡಿದರು. ಭಾನುವಾರ ಸಂಜೆಯೊಳಗೆ ಆರೋಪಿಗಳ ಬಂಧನವಾಗುತ್ತದೆ ಎಂದು ಭರವಸೆ ನೀಡಿದ ನಂತರದಲ್ಲಿ ತಾತ್ಕಾಲಿಕವಾಗಿ ಪ್ರತಿಭಟನೆ ಕೈಬಿಡಲಾಯಿತು.ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.