ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್, ಮಸೂದ್, ಫಾಸಿಲ್ ಹತ್ಯೆ ಸಂಬಂಧ ತ್ವರಿತವಾಗಿ ತನಿಖೆಗೆ ನಡೆಸಬೇಕು. ಯಾವುದೇ ಜಾತಿ, ಮತ ನೋಡದೇ ತನಿಖೆ ನಡೆಸಿ, ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ( Union Minister Amith Shash ), ಸಿಎಂ ಬಸವರಾಜ ಬೊಮ್ಮಾಯಿಗೆ ( CM Basavaraj Bommai ) ಖಡಕ್ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಸಿಎಂ ಬೊಮ್ಮಾಯಿ ಜೊತೆಗೆ ಕೇಂದ್ರ ಗೃಹ ಸಚಿವ ಚರ್ಚೆ ನಡೆಸಿದರು ಎನ್ನಲಾಗಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋಮುದಳ್ಳುರಿಯನ್ನು ನಿಯಂತ್ರಿಸುವಂತ ಎಲ್ಲಾ ಕ್ರಮ ಕೈಗೊಳ್ಳಬೇಕು. ಮೂವರು ಹತ್ಯೆಯ ಬಗ್ಗೆ ತ್ವರಿತವಾಗಿ ತನಿಖೆ ನಡೆಸಬೇಕು. ಕೊಲೆ ಆರೋಪಿಗಳಿಗೆ ಶಿಕ್ಷೆ ಕೊಡಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಕೊಲೆ ಆರೋಪಿಗಳ, ಹತ್ಯೆಗೀಡಾದವರ ಬಗ್ಗೆ ಯಾವುದೇ ಜಾತಿ, ಮತ ನೋಡದೆ ತನಿಖೆ ನಡೆಸಬೇಕು. ಪ್ರಕರಣಗಳ ಬಗ್ಗೆ ತ್ವರಿತವಾಗಿ ತನಿಖೆ ನಡೆಸಿ, ಆರೋಪಿಗಳನ್ನು ಶಿಕ್ಷಿಸಿ ಎಂಬುದಾಗಿ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
BREAKING NEWS: ಭಾರೀ ಮಳೆ ಹಿನ್ನಲೆ: ಚಾಮರಾಜನಗರ ಜಿಲ್ಲೆಯಾಧ್ಯಂತ ನಾಳೆ ನಾಡಿದ್ದು ಶಾಲೆಗಳಿಗೆ ರಜೆ ಘೋಷಣೆ
ಇನ್ನೂ ಕೇವಲ ಸಚಿವರು, ಶಾಸಕರನ್ನು ಮಾತ್ರವೇ ಗಮನಿಸುವುದು ಸರಿಯಲ್ಲ. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತ ಕೆಲಸ ಮಾಡಬೇಕು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಸೂಚನೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.