ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಮನೆಯಲ್ಲಿ ಯಾರು ಇಲ್ಲದ ವೇಳೆ ನೀನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ, ನರಿಮೊಗರು ಬಳಿಯ ನಿವಾಸಿ, ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ (17) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾವ ಕರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವುದು ತನಿಖೆಯ ಬಳಿಕವಷ್ಟೇ ತಿಳಿದು ಬರಬೇಕಿದೆ.