ಮಂಗಳೂರು: ದಕ್ಷಿಣಕನ್ನಡದಲ್ಲಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಪ್ರವೀಣ್ ಸೂದ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದಕ್ಕೆ ಮೊದಲು ಅದನ್ನು ಹೆಚ್ಚಿಸಬೇಕು ಎಂದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.
BIGG NEWS: ಮಂಕಿಪಾಕ್ಸ್ ಗೂ ಮತ್ತೆ ಚಿಕನ್ ಪಾಕ್ಸ್ ಗೂ ವ್ಯತ್ಯಾಸವೇನು? ಬಗ್ಗೆ ವೈದ್ಯರ ಹೇಳೋದೇನು ಗೊತ್ತಾ?
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ. ಮಸೂದ್ ಕೊಲೆ ಪ್ರಕರಣಲ್ಲಿ ಎಂಟು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಬ್ಬರು ಅರೆಸ್ಟ್ ಆಗಿದ್ದಾರೆ. ತನಿಖೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡುತ್ತೇವೆ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಇನ್ನು ಫಾಝಿಲ್ ಹತ್ಯೆಯ ಬಗ್ಗೆ ತನಿಖೆ ನಡೆಸಿದ್ದೇವೆ. ಈ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ ಕಾರು ಪತ್ತೆಯಾಗಿದೆ. ಅದರಲ್ಲಿ ಓರ್ವನನ್ನು ಬಂಧಿಸಲಾಗಿದೆ ಎಂದರು.