ದಕ್ಷಿಣಕನ್ನಡ : ಉಡುಪಿಯಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ನಡೆದ ಬಳಿಕ, ಇದೀಗ ದಕ್ಷಿಣ ಕನ್ನಡದಲ್ಲಿ ಹುಡುಗಿ ವಿಚಾರದಲ್ಲಿ ಯುವಕನೊಬ್ಬನನ್ನು ಪುಂಡರು ಮನೆಯಲ್ಲಿ ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ.
ಹೌದು ಮನೆಯಲ್ಲಿ ಕೂಡಿಹಾಕಿ ಯುವಕನ ಮೇಲೆ ಪುಂಡರು ಹಲ್ಲೆ ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮಾರಣಾಂತಿಕ ಹಲ್ಲೆ ನಡೆಸಿದ ವಿಡಿಯೋ ಕೂಡ ಇದೀಗ ವೈರಲ್ ಆಗಿದೆ. ಬೋಳಂತುರು ನಿವಾಸಿ ರಹಿಂ ಗಾಯಾಳು ವ್ಯಕ್ತಿ ಎಂದು ತಿಳಿದು ಬಂದಿದೆ. ಹುಡುಗಿ ವಿಚಾರದಲ್ಲಿ ಕೂಡಿಹಾಕಿ ಥಳಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.