ಮೈಸೂರು: ದಲಿತ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅನಾರೋಗ್ಯದ ಕಾರಣ ನಿನ್ನೆ ಮೃತಪಟ್ಟಿದ್ದರು. ಅವರ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ, ಇಂದು ಮೈಸೂರಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ನಿನ್ನೆ ಸಾರ್ವಜನಿಕರ ದರ್ಶನಕ್ಕೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ಗಣ್ಯರು, ಕುಟುಂಬಸ್ಥರು ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದು, ಅಂತಿಮ ನಮನವನ್ನು ಸಲ್ಲಿಸಿದ್ದರು.
ಇಂದು ಮೈಸೂರಿನ ಅಶೋಕಪುರಂನಲ್ಲಿರುವಂತ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಗಾಗಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ಟ್ರಸ್ಟ್ ಆವರಣದಲ್ಲಿ ಬೌದ್ಧ ಬಿಕ್ಷುಗಳ ಸಮ್ಮುಖದಲ್ಲಿ ಸಂಸದ ವಿ.ಶ್ರೀನಿವಾಸ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿತು. ಈ ಮೂಲಕ ದಲಿತ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಣ್ಣಲ್ಲಿ ಮಣ್ಣಾಗಿದ್ದಾರೆ.
BREAKING: ಲಂಡನ್ ‘ಟ್ಯೂಬ್ ಸ್ಟೇಷನ್’ನಲ್ಲಿ ಹಲವರಿಗೆ ಚೂರಿಯಿಂದ ಇರಿತ: ವಿಡಿಯೋ ವೈರಲ್ | London Stabbing
ಪ್ರಜ್ವಲ್ ಪ್ರಕರಣ; ಪ್ರಧಾನಿ ಮೋದಿ, ದೇವೇಗೌಡರ ಕುಟುಂಬವೇ ನೇರ ಹೊಣೆ: ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ